ಚಿತ್ರದುರ್ಗ: ರಾಷ್ಟ್ರೀಯ ಪಲ್ಸ್ ಕಾರ್ಯಕ್ರಮದ ಅಂಗವಾಗಿ ಮಾರ್ಚ್ 3ರಿಂದ 6ರವರೆಗೆ ಜಿಲ್ಲೆಯ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೂ ಕ ಡ್ಡಾಯವಾಗಿ ಪೋಲಿಯೋ ಹನಿ ಹಾಕಿಸ ಬೇಕೆಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮದ ಜಿಲ್ಲಾ ಮಟ್ಟದ ಚಾಲನಾ ಸಮಿತಿ ಸಭೆಯ ಲ್ಲಿ ಮಾತನಾಡಿದ ಅವರು, ಜಿಲ್ಲೆಯ ಅರ್ಹ 1,35,105 ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಇದ್ದು, ಯಾವುದೇ ಮಗು ಲಸಿಕೆ ಯಿಂದ ವಂಚಿತವಾಗದಂತೆ ವ್ಯವಸ್ಥಿತವಾಗಿ ಲಸಿಕಾ ಕಾರ್ಯಕ್ರಮ ಯಶಸ್ವಿಗೊಳಿಸಬೇಕು. ಇದರೆಡೆ ಹೆಚ್ಚಿನ ಅರಿವು ಮೂಡಿಸಲು ಗ್ರಾ ಮೀಣ ಹಾಗೂ ನಗರ ಪ್ರದೇಶಗಳಲ್ಲಿ ಜಾಥಾ ಏರ್ಪಡಿಸ ಬೇಕು. ಈ ನಿಟ್ಟಿನಲ್ಲಿ ಆರೋಗ್ಯ,ಶಿಕ್ಷಣ ಮತ್ತಿತರ ಇಲಾಖೆಗಳ ಅಧಿಕಾರಿಗಳು ಸಮನ್ವಯತೆಯೊಂದಿಗೆ ಕೆಲಸ ಮಾಡಬೇಕೆಂದರು.
ಡಿಎಚ್‌ಒ ಡಾ.ಜಿ.ಪಿ.ರೇಣುಪ್ರಸಾದ್ ಅವರು ಮಾತನಾಡಿ,5 ವರ್ಷದೊಳಗಿನ ನಗರ ಪ್ರದೇಶದ 31829 ಮಕ್ಕಳು, ಗ್ರಾಮೀಣ ಪ್ರ ದೇಶದ 103276 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಇದೆ. ಇದಕ್ಕಾಗಿ 1084 ಲಸಿಕಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು. 2,291 ಲಸಿಕಾ ಕಾ ರ್ಯಕರ್ತರು, 259 ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. 3ರಂದು ಕೇಂದ್ರಗಳಲ್ಲೇ ಶೇ.95 ಲಸಿಕೆ ಹಾಕಲಾಗುವುದು. ನಂತರದ ದಿನಗಳಲ್ಲಿ ಮನೆ,ಮನೆ ಭೇಟಿ ಮೂಲಕ ಲಸಿಕೆ ಹಾಕಲಾಗುವುದು ಎಂದರು.
ಬಿಸಿಲು ಹೆಚ್ಚಳದಿಂದಾಗಿ ಲಸಿಕೆ ಹಾಳಾಗುವ ಸಾಧ್ಯತೆ ಇರುವುದರಿಂದ ತಾಲೂಕು ಆರೋಗ್ಯಾಧಿಕಾರಿಗಳು ಹೆಚ್ಚಿನ ಗಮನಹರಿಸಿ, ಮುಂಜಾಗ್ರತಾ ಕ್ರಮವಹಿಸಬೇಕು ಎಂದು ಸಲಹೆ ನೀಡಿದರು.
ವಿಶ್ವ ಆರೋಗ್ಯ ಸಂಸ್ಥೆ ಅಧಿಕಾರಿ ಶ್ರೀಧರ್ ಮಾತನಾಡಿ, ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ ಮತ್ತು ಅಫಘಾನಿಸ್ತಾನದಲ್ಲಿ ಕಳೆದ ವರ್ಷ 11 ಮಕ್ಕಳು ಪೋಲಿಯೋಗೆ ತುತ್ತಾಗಿದ್ದಾರೆ. ಹಾಗಾಗಿ ನಾವು ಪೋಲಿಯೋ ಕುರಿತು ಹೆಚ್ಚಿನ ಜಾಗೃತಿ ವಹಿಸಬೇಕಿದೆ. ನಮ್ಮ ರಾಜ್ಯದಲ್ಲಿ 2007ರ ನಂತರ ಇಲ್ಲಿಯವರೆಗೂ ಯಾವುದೇ ಪೋಲಿಯೋ ಪ್ರಕರಣ ಕಂಡುಬಂದಿಲ್ಲ ಎಂದು ತಿಳಿಸಿದರು.
ಪಲ್ಸ್ ಪೋಲಿಯೋ ಕಾರ್ಯಕ್ರಮ ಕಳೆದ ಬಾರಿ ಜಿಲ್ಲೆಯಲ್ಲಿ ಶೇ.95 ರಷ್ಟು ಸಾಧನೆಯಾಗಿದೆ. ಈ ಬಾರಿ ವಿಶೇಷವಾಗಿ ಚಳ್ಳಕೆರೆ ಹಾ ಗೂ ಮೊಳಕಾಲ್ಮೂರು ತಾಲೂಕುಗಳಿಗೆ ಹೆಚ್ಚಿನ ಗಮನಹರಿಸ ಬೇಕಿದೆ ಎಂದರು. ಜಿಲ್ಲಾ ಆರ್‌ಸಿಎಚ್ ಅಧಿಕಾರಿ ಡಾ.ಅಭಿನವ್ ಮಾತ ನಾಡಿ, ಈಗಾಗಲೇ ಪೋಲಿಯೋ ಮುಕ್ತ ಭಾರತವೆಂದು ಘೋಷಣೆಯಾಗಿದ್ದು,ಒಂದು ಪ್ರಕರ ಪತ್ತೆಯಾದರೂ ಅಂತಾರಾಷ್ಟ್ರೀಯ ಮಟ್ಟ ದಲ್ಲಿ ಸುದ್ದಿಯಾಗಲಿದೆ. ಆದ್ದರಿಂದ ಈ ವಿಚಾರವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸ ಬೇಕಿದೆ ಎಂದರು.
ಮಾರ್ಚ್ 1ರಿಂದ 6ರವರೆಗೆ ಯಾವುದೇ ಕಾರಣಕ್ಕೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಬೆಸ್ಕಾಂ ಅಧಿಕಾರಿಗಳು ಕ್ರಮ ವ ಹಿಸಬೇಕು. ಅಗತ್ಯ 173 ವಾಹನಗಳನ್ನು ಒದಗಿಸಲು ಸಾರಿಗೆ ಇಲಾಖೆ ಕ್ರಮ ವಹಿಸಬೇಕೆಂದರು. ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಕೃಷ್ಣನಾಯ್ಕ ಮತ್ತಿತರರು ಇದ್ದರು.