ಕಲಬುರಗಿ ;
ಮಿಷನ್ ಇಂದ್ರಧನುಷ್ ಅಭಿಯಾನ 5.0 ಉದ್ಘಾಟನಾ ಸಮಾರಂಭವುಇಲ್ಲಿನ ಶಿವಾಜಿ ನಗರದ ದುಬೈ ಕಾಲನಿಯ ಪ್ರಾಥಮಿಕ ಅರೋಗ್ಯ ಕೇಂದ್ರದಲ್ಲಿ 5-0 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಜಿಲ್ಲಾಧಿಕಾರಿ ಬಿ ಫೌಜಿಯಾ ತರನ್ನುಮ್ಹಾ ಹಾಗೂ ಜಿಲ್ಲಾ ಪಂಚಾಯತ್ ಸಿ.ಇ.ಓ. ಭಂವರ ಸಿಂಗ್ ಮೀನಾ ಚಾಲನೆ ನೀಡಿದರು.
ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾಧಿಕಾರಿ ಡಾ.ರಾಜಶೇಖರ ಮಾಲಿ , ಜಿಲ್ಲಾ ಸರ್ಜನ್ ಡಾ.ಅಂಬರಾಯ ರುದ್ರವಾಡಿ, ಆರ್.ಸಿ.ಹೆಚ್
ಅಧಿಕಾರಿ ಡಾ. ಶರಣಬಸಪ್ಪ ಖ್ಯಾತನಾಳ, ಆಡಳಿತಾಧಿಕಾರಿ ಡಾ.ಸಂಧ್ಯಾರಾಣಿ,ಡಾ.ಚಂದ್ರಕಾಂತ ನರಿಬೋಳ ಸೇರಿದಂತೆ ಅಧಿಕಾರಿಗಳು ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.