ಜಿಲ್ಲೆ

ಮೀಸಲಾತಿ ನಿಗದಿಗೆ ದಿನಾಂಕ ಘೋಷಣೆ

ಗದಗ: ಜಿಲ್ಲೆಯ 7 ತಾಲೂಕುಗಳ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾದ ಸದಸ್ಯರ ಸಮ್ಮುಖದಲ್ಲಿ ಮೊದಲ ಅವಧಿಗೆ (30 ತಿಂಗಳು) ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಗಳ ಹುದ್ದೆಗಳ ಮೀಸಲಾತಿ ನಿಗದಿಪಡಿಸುವ ಸಭೆಯ ದಿನಾಂಕವನ್ನು ಜಿಲ್ಲಾಡಳಿತ ಘೋಷಿಸಿದೆ.

ಜ. 24ರಂದು ಬೆಳಗ್ಗೆ 11 ಗಂಟೆಗೆ ಶಿರಹಟ್ಟಿಯ ದೇವರಾಜ ಅರಸ್ ಸಭಾಭವನ ಹಾಗೂ ಮಧ್ಯಾಹ್ನ 3 ಗಂಟೆಗೆ ಲಕ್ಷೆ್ಮೕಶ್ವರದ ಶ್ರೀ ಜಗದ್ಗುರು ವೀರಗಂಗಾಧರ ರಂಭಾಪುರಿ ಸಮುದಾಯ ಭವನದಲ್ಲಿ ಸಭೆ ನಡೆಯಲಿದೆ.

ಜ. 25ರಂದು ಬೆಳಗ್ಗೆ 11.30 ಗಂಟೆಗೆ ಗದಗ ನಗರದ ಶ್ರಿ ಜಗದ್ಗುರು ತೋಂಟದಾರ್ಯ ಕಲ್ಯಾಣ ಮಂಟಪ ಹಾಗೂ ಮಧ್ಯಾಹ್ನ 4 ಗಂಟೆಗೆ ಮುಂಡರಗಿಯ ಶ್ರೀ ಜಗದ್ಗುರು ಅನ್ನದಾನೀಶ್ವರ ಕಲ್ಯಾಣ ಮಂಟಪದಲ್ಲಿ ಸಭೆ ನಡೆಯಲಿದೆ.

ಜ. 27ರಂದು ಬೆಳಗ್ಗೆ 9 ಗಂಟೆಗೆ ನರಗುಂದದ ಶ್ರೀ ಆರೂಢ ಜ್ಯೋತಿ ಭವನದಲ್ಲಿ, ಮಧ್ಯಾಹ್ನ 12 ಗಂಟೆಗೆ ರೋಣದ ಶ್ರೀ ವೀರಭದ್ರೇಶ್ವರ ಕಲ್ಯಾಣ ಮಂಟಪ ಹಾಗೂ ಮಧ್ಯಾಹ್ನ 4 ಗಂಟೆಗೆ ಗಜೇಂದ್ರಗಡದ ಶ್ರೀ ಸಿದ್ಧಲಿಂಗೇಶ್ವರ ಚಿತ್ರಮಂದಿರದಲ್ಲಿ ಸಭೆ ಏರ್ಪಡಿಸಲಾಗಿದೆ.

ಜಿಲ್ಲೆಯ 7 ತಾಲೂಕುಗಳ ಚುನಾಯಿತ ಗ್ರಾಪಂ ಸದಸ್ಯರಿಗೆ ಗ್ರಾಪಂ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಮೀಸಲಾತಿ ನಿರ್ಧರಿಸುವ ಸಭೆಯ ತಿಳಿವಳಿಕೆ ಪತ್ರ ನೀಡಲಾಗಿದೆ. ಈ ಪತ್ರ ತಲುಪದೇ ಇದ್ದಲ್ಲಿ ಪ್ರಕಟಣೆಯನ್ನೇ ಪತ್ರವೆಂದು ಭಾವಿಸಿ ಸಭೆಗೆ ಹಾಜರಾಗಬೇಕು. ಸಭೆಗೆ ಹಾಜರಾಗುವಾಗ ಆಯ್ಕೆಯಾದ ಪ್ರಮಾಣಪತ್ರದ ನಕಲು ಪತ್ರಿಯನ್ನು ಹಾಜರುಪಡಿಸಬೇಕು. ಕೋವಿಡ್-19 ಹಿನ್ನೆಲೆಯಲ್ಲಿ ಸಭೆಗೆ ಹಾಜರಾಗುವ ಸದಸ್ಯರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

EndFragment