ಸಾಗರದಲ್ಲಿ ಬಿಜೆಪಿಯ ನಗರಸಭಾ ಸದಸ್ಯರು ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿಯನ್ನು ತಕ್ಷಣವೇ ಘೋಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಿದರು. 
ಜಿಲ್ಲೆ

ಮೀಸಲಾತಿ ಘೋಷಿಸುವಂತೆ ಸರ್ಕಾರಕ್ಕೆ ಒತ್ತಾಯ

ಸಾಗರ: ನಗರ ಸ್ಥಳೀಯ ಸಂಸ್ಥೆಗಳ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಮೀಸಲಾತಿ ತಕ್ಷಣ ೋಷಣೆ ಮಾಡುವಂತೆ ಒತ್ತಾಯಿಸಿ ಬುಧವಾರ ಬಿಜೆಪಿ ನಗರಸಭಾ ಸದಸ್ಯರು ಉಪವಿಭಾಗಾಧಿಕಾರಿಗಳ ಕಚೇರಿ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಹಾಗೂ ನಗರಸಭೆ ಸದಸ್ಯ ಟಿ.ಡಿ.ಮೇಘರಾಜ್ ಮಾತನಾಡಿ, ನಗರಸಭೆ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಮೊದಲ ಎರಡೂವರೆ ವರ್ಷದ ಅವಧಿ ಮುಗಿದು ಮೂರು ತಿಂಗಳು ಸಮೀಪಿಸುತ್ತಿದೆ. ಮುಂದಿನ ಎರಡೂವರೆ ವರ್ಷಕ್ಕೆ ಈತನಕ ಹೊಸ ಮೀಸಲಾತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿಲ್ಲ. ಸರ್ಕಾರದ ನಿಧಾನಗತಿಯ ನಡೆಯಿಂದ ಚುನಾಯಿತ ಪ್ರತಿನಿಧಿಗಳ ಹಕ್ಕು ಮೊಟಕುಗೊಳ್ಳುತ್ತದೆ. ಆಡಳಿತಾಧಿಕಾರಿಗಳೇ ಆಡಳಿತ ನಡೆಸುತ್ತಿರುವುದರಿಂದ ಬಾಕಿ ಇರುವ ಕೆಲಸಗಳು ಸರಿಯಾಗಿ ನಡೆಯುತ್ತಿಲ್ಲ ಎಂದು ದೂರಿದರು. ನಗರಸಭೆ ಸದಸ್ಯರಾದ ಕೆ.ಆರ್.ಗಣೇಶಪ್ರಸಾದ್, ಮಧುರಾ ಶಿವಾನಂದ್, ಸವಿತಾ ವಾಸು, ವಿ.ಮಹೇಶ್, ಭಾವನಾ ಸಂತೋಷ್, ಶಂಕರ ಅಳ್ವಿಕೋಡಿ, ಪ್ರೇಮ ಕಿರಣ್ ಸಿಂಗ್, ಶ್ರೀರಾಮ್, ಕೆ.ಸತೀಶ್, ದೀಪಕ್ ಇತರರಿದ್ದರು.