ಬೇಲೂರು: ವೀರಶೈವ-ಲಿಂಗಾಯತ ಸಮುದಾಯದ ಮಕ್ಕಳ ಶಿಕ್ಷಣ ಮತ್ತು ಉದ್ಯೋಗ ದೃಷ್ಟಿಯಿಂದ ಸಮಾಜಕ್ಕೆ ಮೀಸಲಾತಿ ಅಗತ್ಯವಿದೆ. ಇದಕ್ಕಾಗಿ ಸಂಘಟನಾತ್ಮಕ ಹೋರಾಟ ನಡೆಸುವ ಅನಿವಾರ್ಯತೆ ಇದೆ ಎಂದು ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ರಾಷ್ಟ್ರೀಯ ಕಾರ್ಯದರ್ಶಿ ರೇಣುಕಾ ಪ್ರಸನ್ನ ಹೇಳಿದರು.
ಪಟ್ಟಣದ ವೀರಶೈವ ಕಲ್ಯಾಣ ಮಂಟಪದಲ್ಲಿ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ವತಿಯಿಂದ ಶನಿವಾರ ಆಯೋಜಿಸಿದ್ದ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಅವರು, ಸಮುದಾಯಕ್ಕೆ ನ್ಯಾಯ ಬದ್ಧವಾಗಿ ಸಿಗಬೇಕಾದ ಒಬಿಸಿ ಮೀಸಲಾತಿಯತ್ತ ಕೇಂದ್ರ ಸರ್ಕಾರ ಗಮನ ಹರಿಸಿಲ್ಲ. ಆದ್ದರಿಂದ ಹೋರಾಟ ಅನಿವಾರ್ಯ ಎಂದರು.
ಸಮಾಜ ಸೇವಕ ರಾಜಶೇಖರ್ ಮಾತನಾಡಿ, ಒಳ ಪಂಗಡದ ಕಿತ್ತಾಟದಿಂದ ಸಮಾಜ ರಾಜಕೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕವಾಗಿ ಹಿಂದುಳಿದಿದೆ. ಇದಕ್ಕೆ ಕಾರಣ ಒಳ ಪಂಗಡದಲ್ಲಿನ ಗೊಂದಲ ಎಂದರು.
ಅರಕಲಗೂಡು ದೊಡ್ಡಮಠದ ಮಲ್ಲಿಕಾರ್ಜುನ ಸ್ವಾಮೀಜಿ, ಕಾರ್ಜುಹಳ್ಳಿ ಶ್ರೀ ಸದಾಶಿವ ಸ್ವಾಮೀಜಿ, ಶಾಸಕ ಕೆ.ಎಸ್.ಲಿಂಗೇಶ್, ವೀರಶೈವ ಸಂಘದ ಜಿಲ್ಲಾಧ್ಯಕ್ಷ ಗುರುದೇವ್, ತಾಲೂಕು ಅಧ್ಯಕ್ಷ ರವಿಕುಮಾರ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕೊರಟಿಕೆರೆ ಪ್ರಕಾಶ್, ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ನಟರಾಜ್, ಹಿರಿಯ ವಕೀಲರಾದ ಸಿ.ಎಂ.ನಿಂಗರಾಜ್, ಬಿ.ಎಸ್.ರಾಜಶೇಖರ, ಪ್ರಧಾನ ಕಾರ್ಯದರ್ಶಿ ಮಹದೇವ, ಸಿದ್ದೇಶ್ ನಾಗೇಂದ್ರ, ಮುಖಂಡರಾದ ಬಿ.ಕೆ.ಚಂದ್ರಕಲಾ, ಸಂತೋಷ ಕೆಂಚಾಂಬ, ವಿಕ್ರಂ, ಅನ್ನಪೂರ್ಣ, ದಿನೇಶ್, ಕಾಂತರಾಜ್, ಕಟ್ಟಾಯ ಶಿವಕುಮಾರ್, ಯುವ ಘಟಕದ ಅಧ್ಯಕ್ಷ ಗೆಂಡೇಹಳ್ಳಿ ಚೇತನ್, ಅದ್ದೂರಿ ಚೇತನ್ ಇತರರಿದ್ದರು.
ವೀರಶೈವ-ಲಿಂಗಾಯತ ಸಮುದಾಯ ಎಲ್ಲರನ್ನೂ ಜತೆಯಲ್ಲಿ ತೆಗೆದುಕೊಂಡು ಹೋಗುತ್ತದೆ. ಆದರೂ ಇಂದು ಶೈಕ್ಷಣಿಕ ಹಾಗೂ ರಾಜಕೀಯ ಸ್ಥಾನ ಮಾನಕ್ಕಾಗಿ ಹೋರಾಟ ನಡೆಸುವ ಪರಿಸ್ಥಿತಿ ಬಂದಿದೆ. ಬೇಲೂರಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಿರುವುದು ನಿಜಕ್ಕೂ ಅರ್ಥಪೂರ್ಣ. ಈಗಾಗಲೇ ಬೇಲೂರು ತಾಲೂಕಿನಲ್ಲಿ ಪುಷ್ಪಗಿರಿ ರಾಷ್ಟ್ರೀಯ ಉತ್ಸವ, ತರಳಬಾಳು ಉತ್ಸವ, ರಂಭಾಪುರಿ ದಸರ ಮಹೋತ್ಸವ ಹೀಗೆ ನಾನಾ ರಾಜ್ಯ ಮಟ್ಟದ ಕಾರ್ಯಕ್ರಮ ನಡೆದಿರುವುದು ತೃಪ್ತಿ ತಂದಿದೆ.
> ಕೆ.ಎಸ್.ಲಿಂಗೇಶ್, ಶಾಸಕ ಬೇಲೂರು
ಫೋಟೋ ಇದೆ 25ರಲ್ಲಿ