ಬೈಲಹೊಂಗಲ: ಲಿಂಗಾಯತ ಪಂಚಮಸಾಲಿ ಸಮುದಾಯದ ಸಚಿವರು, ಶಾಸಕರು ಮುಂಗಾರು ಅಧಿವೇಶನದಲ್ಲಿ 2ಎ ಮೀಸಲಾತಿಗೆ ಧ್ವನಿ ಎತ್ತುವಂತೆ ಒತ್ತಾಯಿಸಿ ಪತ್ರ ಚಳವಳಿಗೆ ಕರೆ ನೀಡಲಾಗಿದೆ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠಾಧ್ಯ ಜಗದ್ಗುರು ಬಸವಜಯ ಮತ್ಯುಂಜಯ ಸ್ವಾಮೀಜಿ ಹೇಳಿದರು.
ತಾಲೂಕಿನ ನೇಗಿನಹಾಳ ಗ್ರಾಮದ ಗುರು ಮಡಿವಾಳೇಶ್ವರ ಶಿವಯೋಗಿಗಳ ಮಠದಿಂದ ಮೆರವಣಿಗೆ ಮೂಲಕ ಆಗಮಿಸಿ ಚನ್ನಮ್ಮನ ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ ಅವರಿಗೆ ಮನವಿ ಸಲ್ಲಿಸಿ ಮಾತನಾಡಿ, ಪಂಚಮಸಾಲಿಗರಿಗೆ ಶೆಣಿಕ ಹಾಗೂ ಉದ್ಯೋಗದಲ್ಲಿ '2ಎ' ಮೀಸಲಾತಿ ಹಾಗೂ ಲಿಂಗಾಯತ ಸಮುದಾಯದ ಎಲ್ಲ ಉಪ ಸಮುದಾಯಗಳಿಗೂ ಒಬಿಸಿ ಮೀಸಲಾತಿ ಕಲ್ಪಿಸುವಂತೆ ಶಾಸಕರು ರಾಜ್ಯ ಸರ್ಕಾರಕ್ಕೆ ಒತ್ತಡ ಹೇರಬೇಕು ಎಂದರು. ಕೊಟ್ಟ ಮಾತಿನಂತೆ ಮುಖ್ಯಮಂತ್ರಿಗಳು ಇದುವರೆಗೂ ಕಾನೂನಾತ್ಮಕ ಸಭೆ ನಡೆಸಿಲ್ಲ. ಬೇಡಿಕೆ ಈಡೇರಿಸಲು ಇಚ್ಛಾಶಕ್ತಿ ತೋರುತ್ತಿಲ್ಲ. ನಮ್ಮ ಸಮುದಾಯದ ಎಲ್ಲ ಶಾಸಕರು ಅಧಿವೇಶನದಲ್ಲಿ ಧ್ವನಿ ಎತ್ತದಿರುವುದು ಅಸಮಾಧಾನ ತಂದಿದೆ. ಮುಂಗಾರು ಅಧಿವೇಶನದಲ್ಲಿ ಮೀಸಲಾತಿಗೆ ಆಗ್ರಹಿಸಬೇಕು ಎಂದು ಕರೆ ನೀಡಿದರು.
ಶಾಸಕ ಬಾಬಾಸಾಹೇಬ ಪಾಟೀಲ ಅವರು ಶ್ರೀಗಳ ಪತ್ರ ಸ್ವೀಕರಿಸಿ ಮಾತನಾಡಿ, ಮುಂಗಾರು ಅಧಿವೇಶನದಲ್ಲಿ ಲಿಂಗಾಯತ ಪಂಚಮಸಾಲಿ ಮೀಸಲಾತಿ ಬೇಡಿಕೆ ಕುರಿತು ಸದನದಲ್ಲಿ ಪ್ರಸ್ತಾಪಿಸಲಾಗುವುದು ಎಂದರು. ಮಾಜಿ ಶಾಸಕ ಡಾ.ವಿಶ್ವನಾಥ ಪಾಟೀಲ, ಜಿಲ್ಲಾಧ್ಯ ಆರ್.ಕೆ ಪಾಟೀಲ, ನಿಂಗಪ್ಪ ಪಿರೋಜಿ, ಧರೆಪ್ಪ ಠಕ್ಕಣ್ಣವರ, ಜಿಪಂ ಮಾಜಿ ಸದಸ್ಯ ರೋಹಿಣಿ ಪಾಟೀಲ, ಶ್ರೀಶೈಲ ಬೋಳಣ್ಣವರ, ಮಹೇಶ ಹರಕುಣಿ, ಗುಂಡು ಪಾಟೀಲ, ರಾಜು ಕುಡಸೋಮನ್ನವರ, ಸಂಜಯ ಬಾವಿ, ದೊಡ್ಡಗೌಡ ಹುಚ್ಚಗೌಡರ ಇತರರು ಇದ್ದರು.