ಜಿಲ್ಲೆ

ಮುಂದಿನವಾರ ಬಾನು ಮುಷ್ತಾಕ್'ಗೆ ದಸರಾ ಆಹ್ವಾನ: ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ

ಮೈಸೂರು: ದಸರಾ ಉದ್ಘಾಟಕರಾದ ಸಾಹಿತಿ ಬಾನು ಮುಷ್ತ್ತಾಕ್ ಅವರಿಗೆ ಸೆಪ್ಟಂಬರ್ ಮೊದಲ ವಾರದಲ್ಲಿ ಜಿಲ್ಲಾಡಳಿತ ವತಿಯಿಂದ ಅಧಿಕೃತವಾಗಿ ಆಹ್ವಾನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ ತಿಳಿಸಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಸಕ್ತ ಸಾಲಿನ ನಾಡಹಬ್ಬ ದಸರಾ ಮಹೋತ್ಸವದ ಉದ್ಘಾಟಕರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ಘೋಷಣೆ ಮಾಡಿದ್ದಾರೆ.

ಸರ್ಕಾರ ಆಯ್ಕೆ ಮಾಡಿರುವ ಬಾನು ಮುಷ್ತಾಕ್ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಲಾಗುವುದು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ದಸರಾ ಉದ್ಘಾಟಕರ ಬದಲಾವಣೆ ಕುರಿತಂತೆ ಈವರೆಗೂ ಜಿಲ್ಲಾಡಳಿತಕ್ಕೆ ಯಾವುದೇ ದೂರು ಸಲ್ಲಿಕೆಯಾಗಿಲ್ಲ ಎಂದು ತಿಳಿಸಿದರು.