ಸರಗೂರು: ನೆರೆ ಹಾವಳಿಯಿಂದ ಮನೆ ಕಳೆದುಕೊಂಡವರನ್ನು ಫಲಾನುಭವಿಗಳ ಪಟ್ಟಿಯಿಂದ ಕೈಬಿಟ್ಟು ವಿಚಾರವಾಗಿ ತಾಲೂಕು ಕಚೇರಿಯ ಮುಂಭಾಗದಲ್ಲಿ ನೆರೆ ಸಂತ್ರಸ್ತರ ಹೋರಾಟ ಸಮಿತಿಯ ವತಿಯಿಂದ ಹಮ್ಮಿಕೊಂಡಿರುವ ಅಹೋರಾತ್ರಿ ಧರಣಿ ಮಂಗಳವಾರ ಆರನೇ ದಿನ ಪೂರೈಸಿದೆ.
ಜಿಲ್ಲಾ ಪಂಚಾಯಿತಿ ಸದಸ್ಯೆ ಭಾಗ್ಯಲಕ್ಷ್ಮಿನಿಂಗರಾಜು ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿ, ನಿರಂತರವಾಗಿ ಹೋರಾಟ ನಡೆಯುತ್ತಿದ್ದರೂ ಯಾವ ಅಧಿಕಾರಿಯೂ ಗಮನಹರಿಸಿಲ್ಲ. ಕೂಡಲೇ ಸರ್ಕಾರ ಎಚ್ಚೆತ್ತುಕೊಂಡು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಬೃಹತ್ ಪ್ರತಿಭಟನೆ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ನೆರೆ ಸಂತ್ರಸ್ತರ ಒಕ್ಕೂಟ ಸಮಿತಿಯ ಅಧ್ಯಕ್ಷ ನೀಲಮ್ಮ, ಆದಿಕರ್ನಾಟಕ ಮಹಾಸಭಾ ಅಧ್ಯಕ್ಷ ಸರಗೂರು ಶಿವಣ್ಣ, ಸಂವಿಧಾನ ಸಂರಕ್ಷಣಾ ಸಮಿತಿ ಅಧ್ಯಕ್ಷ ಬೀರ್ವಾಳ್ ಬಸವರಾಜು, ಜಿಪಂ ಮಾಜಿ ಸದಸ್ಯ ಚಿಕ್ಕವೀರನಾಯಕ, ದಲಿತ ಮುಖಂಡ ಚಾ.ನಂಜುಂಡಮೂರ್ತಿ, ಪುಟ್ಟಮಾದು, ಬೆಟ್ಟಸ್ವಾಮಿ, ಮಲ್ಲೇಶ್, ಗ್ರಾಮೀಣ ಮಹೇಶ್, ಚಿಕ್ಕಣ್ಣ, ಚಿನ್ನಯ್ಯ, ಶ್ರೀನಿವಾಸ, ಸರಗೂರು ಕೃಷ್ಣ, ಗ್ರಾಪಂ ಸದಸ್ಯ ನಾಗರಾಜು, ಶಿವಚನ್ನ, ಶಿವರಾಜು ಅರಸು ಇತರರು ಇದ್ದರು.