ಜಿಲ್ಲೆ

ಮುಕ್ತ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಚಾಲನೆ

ನಾಪೋಕ್ಲು: ಸಮೀಪದ ಬಲ್ಲಮಾವಟಿ ಗ್ರಾಮದ ಭಜರಂಗಿ ಯೂತ್ ಕ್ಲಬ್ ವತಿಯಿಂದ ನೇತಾಜಿ ಪ್ರೌಢಶಾಲಾ ಆಟದ ಮೈದಾನದಲ್ಲಿ ಆಯೋಜಿಸಿದ್ದ ಮುಕ್ತ ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿಗೆ ಶನಿವಾರ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಚೋಕಿರ ಬಾಬಿ ಭೀಮಯ್ಯ ಮಾತನಾಡಿ, ಗ್ರಾಮೀಣ ಭಾಗದಲ್ಲಿ ವಿವಿಧ ಕ್ರೀಡಾಪಟುಗಳನ್ನು ಆಯೋಜಿಸಿರುವುದು ಸಂತೋಷದ ವಿಷಯ. ಯುವ ಪ್ರತಿಭೆಗಳನ್ನು ಹೊರತರಲು ಇಂತಹ ಟೂರ್ನಿಗಳು ಸಹಕಾರಿಯಾಗಿವೆ ಎಂದರು.

ದಾನಿ ಪೆಬ್ಬೆಟ್ಟಿರ ಯತೀಶ್ ಕ್ರಿಕೆಟ್ ಟೂರ್ನಿಗೆ ಚಾಲನೆ ನೀಡಿದರು. ಮೊದಲ ದಿನದ ಪಂದ್ಯಾಟದಲ್ಲಿ ಗ್ರೂಪ್ ಎ ನಿಂದ ಹಾಕತ್ತೂರಿನ ಯಟೆಕ್ ಬಾಯ್ಸ ತಂಡ ಮತ್ತು ಬಿ ಗುಂಪಿನಿಂದ ಕಟ್ಟೆ ಮಾಡಿನ ಬ್ಲಾಕ್ ಈಗೆಲ್ ತಂಡ ಸೆಮಿ ಫೈನಲ್ ಹಂತಕ್ಕೆ ಪ್ರವೇಶಿಸಿದವು.