ಚಾಮರಾಜನಗರ: ತಾಲೂಕಿನ ಚಿಕ್ಕಹೋಳೆ ಚೆಕ್‌ಪೋಸ್ಟ್ ಬಳಿ ಪ್ರತಿಭಟನೆ ಮಾಡುತ್ತಿರುವ ಸಂದರ್ಭದಲ್ಲಿ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿರುವ ವ್ಯಕ್ತಿಯ ವಿರುದ್ಧ ಸೂಕ್ತ ಕಾನೂನು ಕ್ರಮಕೈಗೊಳ್ಳುವಂತೆ ಅಹಿಂದ ಸಂಘಟನೆಯ ಜಿಲ್ಲಾಧ್ಯಕ್ಷ ಎಂ.ಮಹೇಶ್ ಹಳೇಪುರ ಆಗ್ರಹಿಸಿದ್ದಾರೆ.
ಕಾವೇರಿ ನೀರನ್ನು ತಮಿಳುನಾಡಿಗೆ ಬಿಟ್ಟಿರುವ ವಿಚಾರದಲ್ಲಿ ಪ್ರತಿಭಟನೆ ಮಾಡುತ್ತಿರುವಾಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಹೋರಾಟಗಾರ ಸುರೇಶ್ ವಾಜಪೇಯಿ ಎಂಬ ವ್ಯಕ್ತಿ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು. ಇಲ್ಲವಾದರೇ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.