ಜಿಲ್ಲೆ

ಮುದುಡಿ ಗ್ರಾಮದಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ

ಅರಸೀಕೆರೆ: ಅರಸೀಕೆರೆ ಮಾರ್ಗವಾಗಿ ಮೈಸೂರಿಗೆ ಪ್ರತಿನಿತ್ಯ ಸಂಚರಿಸುವ ಬಸ್ ನಿಲುಗಡೆಗೆ ಅವಕಾಶ ಕಲ್ಪಿಸುವಂತೆ ಒತ್ತಾಯಿಸಿ ಮುದುಡಿ ಗ್ರಾಮದಲ್ಲಿ ಶಾಲಾ, ಕಾಲೇಜು ವಿದ್ಯಾರ್ಥಿಗಳು ಚಿತ್ರದುರ್ಗ ಡಿಪೋ ಬಸ್ ತಡೆದು ಗುರುವಾರ ಕೆಲ ಕಾಲ ದಿಢೀರ್ ಪ್ರತಿಭಟನೆ ನಡೆಸಿದರು.


ವಿದ್ಯಾರ್ಥಿ ಮುಖಂಡ ದರ್ಶನ್ ಮಾತನಾಡಿ, ಚನ್ನರಾಯಪಟ್ಟಣ, ಗಂಡಸಿ, ಹಾಸನ ಸೇರಿದಂತೆ ವಿವಿಧೆಡೆ ವ್ಯಾಸಂಗಕ್ಕೆ ತೆರಳುವ ವಿದ್ಯಾರ್ಥಿಗಳಿಗೆ ಅರಸೀಕೆರೆ ಮಾರ್ಗವಾಗಿ ಮೈಸೂರಿಗೆ ಸಂಚರಿಸುವ ಹಾಗೂ ಚಿತ್ರದುರ್ಗ ಒಳಗೊಂಡಂತೆ ಹಲವು ಡಿಪೋಗಳ ಬಸ್‌ಗಳು ನಿಲುಗಡೆಯಾಗುತ್ತಿಲ್ಲ. ಇದರಿಂದ ನಿತ್ಯ ಸಮಸ್ಯೆ ಎದುರಾಗಿದೆ. ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಅಧಿಕಾರಿಗಳು ಕ್ರಮಕ್ಕೆ ಮುಂದಾಗಬೇಕು ಎಂದು ಒತ್ತಾಯಿಸಿದರು. ಇದರಿಂದ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.
ಸಯ್ಯದ್ ಮೂಸೀನ್, ದರ್ಶನ್ ನಾಯ್ಕ, ಪುನೀತ್ ಇತರರಿದ್ದರು.