ನಾಪೋಕ್ಲು: ಇಲ್ಲಿನ ಚೆರಿಯಪರಂಬುವಿನ ಜನರಲ್ ಕೆ.ಎಸ್.ತಿಮ್ಮಯ್ಯ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಬಾಳೆಯಡ ಕಪ್ ಕ್ರಿಕೆಟ್ ನಮ್ಮೆಯಲ್ಲಿ ಆರು ತಂಡ ಶುಕ್ರವಾರ ಮುನ್ನಡೆ ಸಾಧಿಸಿದವು.
ದಿನದ ಮೊದಲ ಪಂದ್ಯದಲ್ಲಿ ಮುಕ್ಕಾಟಿರ(ಕುಂಬಳದಾಳು) ತಂಡದ ವಿರುದ್ಧ ತಂಬುಕುತ್ತೀರ ತಂಡ 11 ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತು. ಉತ್ತರವಾಗಿ ಆಡಿದ ಮುಕ್ಕಾಟಿರ (ಕುಂಬಳದಾಳು) ತಂಡ ಏಳು ವಿಕೆಟ್ ನಷ್ಟಕ್ಕೆ 26 ರನ್ ಗಳಿಸಿತು. ಈ ಪಂದ್ಯದಲ್ಲಿ ತಂಬುಕುತ್ತಿರ ತಂಡ ಗೆಲುವು ಸಾಧಿಸಿತು.
ಮುಂದಿನ ಪಂದ್ಯದಲ್ಲಿ ಅಟ್ರಂಗಡ ವಿರುದ್ಧ ಮಣವಟ್ಟಿರ ತಂಡ ಮೂರು ವಿಕೆಟ್ ನಷ್ಟಕ್ಕೆ 76 ರನ್ ಗಳಿಸಿತು.ಅಟ್ರಂಗಡ ತಂಡ ಒಂದು ವಿಕೆಟ್ ನಷ್ಟಕ್ಕೆ 80 ರನ್ ಗಳಿಸಿ ಗೆಲವು ಸಾಧಿಸಿತು. ಮತ್ತೊಂದು ಪಂದ್ಯದಲ್ಲಿ ಕುಂಡ್ಯೋಳಂಡ ತಂಡದ ವಿರುದ್ಧ ಅಚ್ಚಪಂಡ ತಂಡ ಸ್ಪರ್ಧಿಸಿತು. ಅಚ್ಚಪಂಡ ತಂಡ 5 ವಿಕೆಟ್ ನಷ್ಟಕ್ಕೆ 48 ರನ್ ಗಳಿಸಿದರೆ ಕುಂಡ್ಯೋಳಂಡ ತಂಡ ಎರಡು ವಿಕೆಟ್ ನಷ್ಟಕ್ಕೆ 49 ರನ್ ಗಳಿಸಿ ಗೆಲುವು ಸಾಧಿಸಿತು.
ಮುಕ್ಕಾಟಿರ(ಬೇತ್ರಿ) ತಂಡದ ವಿರುದ್ಧ ಕುಲ್ಲೆಟಿರ ತಂಡ ಎರಡು ವಿಕೆಟ್ ನಷ್ಟಕ್ಕೆ 68 ರನ್ ಗಳಿಸಿತು. ಮುಕ್ಕಾಟಿರ ತಂಡ ನಾಲ್ಕು ವಿಕೆಟ್ ನಷ್ಟಕ್ಕೆ 25 ರನ್ ಗಳಿಸಿ ಸೋಲು ಅನುಭವಿಸಿತು. ಮುಂದಿನ ಪಂದ್ಯದಲ್ಲಿ ಮಾಚೆಟ್ಟಿರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 70 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಆಡಿದ ಕಂಬೀರಂಡ ತಂಡ 6 ವಿಕೆಟ್ ನಷ್ಟಕ್ಕೆ 46 ರನ್ ಗಳಿಸಿತು. ಈ ಪಂದ್ಯದಲ್ಲಿ ಮಾಚೆಟ್ಟಿರ ತಂಡ ಗೆಲುವು ಸಾಧಿಸಿತು. ಮುಂದಿನ ಪಂದ್ಯದಲ್ಲಿ ಮಾಲೆಟ್ಟಿರ ( ಕೆದಮುಳ್ಳೂರು) ತಂಡದ ವಿರುದ್ಧ ನಾಯಕಂಡ ಐದು ವಿಕೆಟ್ ನಷ್ಟಕ್ಕೆ 28 ರನ್ ಗಳಿಸಿತು. ಉತ್ತರವಾಗಿ ಆಡಿದ ಮಾಲೆಟ್ಟಿರ ತಂಡ ಯಾವುದೇ ವಿಕೆಟ್ ನಷ್ಟವಿಲ್ಲದೆ 29 ರನ್ ಗಳಿಸಿ ಗೆಲುವು ಸಾಧಿಸಿತು.