ಜಿಲ್ಲೆ

ಮುರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಬರೆದ 2228 ವಿದ್ಯಾರ್ಥಿಗಳು

ಹರಪನಹಳ್ಳಿ: ವಿವಿಧ ಮುರಾರ್ಜಿ ವಸತಿ ಶಾಲೆಯ ಪ್ರವೇಶ ಪರೀಕ್ಷೆ ಭಾನುವಾರ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದ್ದು, 2228 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ.

ಒಟ್ಟು 2242 ವಿದ್ಯಾರ್ಥಿಗಳ ನೋಂದಣಿ ಮಾಡಿಸಿದ್ದು, 14 ಮಕ್ಕಳು ಗೈರಾಗಿದ್ದರು. ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದರು.

ಪರೀಕ್ಷೆ ಆರಂಭಕ್ಕೂ ಮುನ್ನ ವಿವಿಧ ಹಳ್ಳಿಗಳಿಂದ ಆಗಮಿಸಿದ್ದ ಪಾಲಕರು ಮತ್ತು ಪೋಷಕರು ತಮ್ಮ ತಮ್ಮ ಮಕ್ಕಳನ್ನು ಸಂಬಂಧಪಟ್ಟ ಕೊಠಡಿಗಳಿಗೆ ಬಿಟ್ಟು ಹೋಗುವಾಗ ಜನದಟ್ಟಣೆ ಉಂಟಾಗಿತ್ತು. ಬಹುತೇಕ ಪಾಲಕರು, ಪೋಷಕರು ಪರೀಕ್ಷೆ ಮುಗಿಯುವವರೆಗೂ ಕೇಂದ್ರದ ಹೊರಗೆ ಕಾದುಕುಳಿತಿರುವುದು ಕಂಡು ಬಂತು.

ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಅತೀ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆಗೆ ಆಗಮಿಸಿದ್ದರಿಂದ ಪರೀಕ್ಷೆ ಮುಗಿದ ಬಳಿಕ ಮಕ್ಕಳನ್ನು ಕರೆದುಕೊಂಡು ಹೋಗಲು ಸಾಲಿನಲ್ಲಿ ನಿಂತಿದ್ದು ಕಂಡು ಬಂತು.