ಸಕಲೇಶಪುರ: ಕಾಂಗ್ರೆಸ್ ಅಭ್ಯರ್ಥಿ ಮುರುಳಿಮೋಹನ್ ಬುಧವಾರ ಉಪವಿಭಾಗಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ನಾಮಪತ್ರ ಸಲ್ಲಿಸಿದರು.
ಸಕಲೇಶ್ವರಸ್ವಾಮಿಗೆ ಪೂಜೆ ಸಲ್ಲಿಸಿದ ನಂತರ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಿದ ಮುರುಳಿಮೋಹನ್ ನಂತರ ಸಕಲೇಶ್ವರಸ್ವಾಮಿ ದೇವಸ್ಥಾನದಿಂದ ಹಳೇ ಬಸ್ ನಿಲ್ದಾಣದವರೆಗೆ ತಮ್ಮ ಅಪಾರ ಬೆಂಬಲಿಗರೊಂದಿಗೆ ರೋಡ್ ಶೋ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದರು. ನಾಮಪತ್ರ ಸಲ್ಲಿಕೆ ವೇಳೆ ಸಕಲೇಶಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬೈರಮುಡಿ ಚಂದ್ರು, ಮಾಜಿ ಅಧ್ಯಕ್ಷ ಹಾನುಬಾಳ್ ಬಾಸ್ಕರ್, ಆಲೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಿವಮೂರ್ತಿ, ಮಾಜಿ ಅಧ್ಯಕ್ಷ ರಂಗನಾಥ್ ಮುಂತಾದವರಿದ್ದರು.
ಪ್ರಮುಖ ಟಿಕೆಟ್ ಆಕಾಂಕ್ಷಿಯಾಗಿದ್ದ ಸಣ್ಣಸ್ವಾಮಿ, ಮುಖಂಡ ಮಸ್ತಾರೆ ಲೋಕೇಶ್ ಸೇರಿದಂತೆ ಹಲವರ ಗೈರು ಎದ್ದುಕಾಣುತಿತ್ತು.
ಬಂದ್: ಪಟ್ಟಣದ ಮುಖ್ಯ ರಸ್ತೆಯಲ್ಲಿ ಅಭ್ಯರ್ಥಿ ರೋಡ್ ಶೋ ನಡೆಸಿದ ಪರಿಣಾಮ ಹೆದ್ದಾರಿಯಲ್ಲಿ ವಾಹನ ಸಂಚಾರ ನಿರ್ಬಂಧಿಸಿದ್ದ ಪೊಲೀಸರು ಲಘುವಾಹನಗಳಿಗೆ ಅಜಾದ್ ರಸ್ತೆ, ಅಶೋಕ ರಸ್ತೆ ಮೂಲಕ ಸಂಚಾರಕ್ಕೆ ಅವಕಾಶ ಕಲ್ಪಿಸಿದ್ದರು.