ಜಿಲ್ಲೆ

ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಿ

ಶನಿವಾರಸಂತೆ: ರಕ್ತದಾನ ಮಾಡುವುದರಿಂದ ಆರೋಗ್ಯ ವೃದ್ಧಿಸುತ್ತದೆ ಎಂದು ಬೆಂಗಳೂರಿನ ಸ್ವಾಮಿ ವಿವೇಕಾನಂದ ವಾಲೆಂಟರಿ ಬ್ಲಡ್ ಬ್ಯಾಂಕ್ ವೈದ್ಯಾಧಿಕಾರಿ ಡಾ.ಎನ್.ಈಶ್ವರ್ ಅಭಿಪ್ರಾಯಪಟ್ಟರು.

ಭಾರತಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್ ಕ್ರಾಸ್ ಘಟಕ, ಲಯನ್ಸ್ ಕ್ಲಬ್ ಮತ್ತು ಸ್ವಾಮಿ ವಿವೇಕಾನಂದ ಯೂತ್ ಮೂವ್‌ಮೆಂಟ್, ಸ್ವಾಮಿ ವಿವೇಕಾನಂದ ವಾಲೆಂಟರಿ ಬ್ಲಡ್ ಬ್ಯಾಂಕ್ ಸಹಯೋಗದಲ್ಲಿ ಇಲ್ಲಿನ ಭಾರತಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ಸಾರ್ವಜನಿಕ ಸ್ವಯಂ ಪ್ರೇರಿತ ರಕ್ತದಾನ ಶಿಬಿರದಲ್ಲಿ ಮಾತನಾಡಿದರು.

ರಕ್ತದಾನ ಮಾಡುವುದರಿಂದ ಪರಿಶುದ್ದ ರಕ್ತ ಉತ್ಪತ್ತಿಯಾಗುವುದರ ಜತೆ ಆರೋಗ್ಯವೂ ವೃದ್ಧಿಸುತ್ತದೆ. ಆರೋಗ್ಯವಂತ ವ್ಯಕ್ತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದು ಎಂದರು.

ಶಿಬಿರವನ್ನು ಲಯನ್ಸ್ ಕ್ಲಬ್ ಅಧ್ಯಕ್ಷ ಎನ್.ಕೆ.ಅಪ್ಪಸ್ವಾಮಿ ಉದ್ಘಾಟಿಸಿದರು. ಭಾರತಿ ವಿದ್ಯಾಸಂಸ್ಥೆ ಅಧ್ಯಕ್ಷ ಎಚ್.ಪಿ.ಶೇಷಾದ್ರಿ, ಗೌರವ ಕಾರ್ಯದರ್ಶಿ ಕೆ.ಎಂ.ಜಗನ್‌ಪಾಲ್, ಲಯನ್ಸ್ ಕ್ಲಬ್ ಖಜಾಂಚಿ ಬಿ.ಕೆ.ಚಿಣ್ಣಪ್ಪ, ಭಾರತಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲ ಇ.ಎಂ.ದಯಾನಂದ್, ಲಯನ್ಸ್ ಪ್ರಮುಖರಾದ ನಾರಾಯಣ ಸ್ವಾಮಿ, ಪರಮೇಶ್, ಕೆ.ಎನ್.ಕಾರ್ಯಪ್ಪ, ರಾಷ್ಟ್ರೀಯ ಸೇವಾ ಘಟಕದ ಯೋಜನಾಧಿಕಾರಿ ಎಂ.ಎನ್,ಹರೀಶ್, ಹಿರಿಯ ಉಪನ್ಯಾಸಕ ಮೋಹನ್ ಮುಂತಾದವರಿದ್ದರು.