ಜಿಲ್ಲೆ

ಮೂರ್ತಿ ಪ್ರತಿಷ್ಠಾಪನೆ ವಾರ್ಷಿಕೋತ್ಸವ

ಬೆಳಗಾವಿ: ಶ್ರೀ ದಾನಮ್ಮದೇವಿ ಮೂರ್ತಿ ಪ್ರತಿಷ್ಠಾಪನೆಯ 40ನೇ ವಾರ್ಷಿಕೋತ್ಸವ ಸಮಾರಂಭ ಹಾಗೂ ಸಾಮಗ್ರಿ ವಿತರಣೆ ಕಾರ್ಯಕ್ರಮ ಫೆ.6 ರಿಂದ ಆರಂಭವಾಗಿದ್ದು, ಫೆ.11ರ ವರೆಗೆ ಬೆಳಗಾವಿ ಶಹಾಪುರದಲ್ಲಿ ಜರುಗಲಿದೆ.

ಫೆ.10ರಂದು ವಾರ್ಷಿಕೋತ್ಸವ ನಿಮಿತ್ತ ಸಾಮಗ್ರಿಗಳ ವಿತರಣೆ ಮಾಡಲಾಗುಗುವುದು. ಸಾನ್ನಿಧ್ಯವನ್ನು ಕಾರಂಜಿಮಠದ ಗುರುಸಿದ್ಧ ಸ್ವಾಮೀಜಿ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ ಆಗಮಿಸಲಿದ್ದು, ಬೆಳಗಾವಿ ಲಿಂಗಾಯತ ಮಹಾಸಭೆ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಅಧ್ಯಕ್ಷತೆ ವಹಿಸಲಿದ್ದಾರೆ.

ವೀರಶೈವ ಲಿಂಗಾಯತ ಮಹಿಳಾ ಮಂಡಳ ಅಧ್ಯಕ್ಷೆ ಶೈಲಜಾ ಭಿಂಗೆ ಹಾಗೂ ಲಿಂಗಾಯತ ಮಹಾಸಭೆ ಜಿಲ್ಲಾ ಘಟಕದ ಉಪಾಧ್ಯಕ್ಷೆ ಡಾ.ಗುರುದೇವಿ ಹುಲೆಪ್ಪನವರಮಠ ಅವರನ್ನು ಸನ್ಮಾನಿಸಲಾಗುವುದು. ಫೆ.11ರಂದು ಮಧ್ಯಾಹ್ನ ಮಹಾಪ್ರಸಾದ ವಿತರಿಸಲಾಗುವುದು.

ಎಲ್ಲ ಭಕ್ತಾದಿಗಳು ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ದೇವಿಯ ಕೃಪೆಗೆ ಪಾತ್ರರಾಗಬೇಕೆಂದು ಶ್ರೀ ದಾನಮ್ಮದೇವಿ ವಾರ್ಷಿಕೋತ್ಸವ ಸಮಿತಿ ಕಾರ್ಯದರ್ಶಿ ಸಿ.ಎಂ.ಕಿತ್ತೂರು, ಅಧ್ಯಕ್ಷ ಚಂದ್ರಶೇಖರ ಬೆಂಬಳಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.