ಚಿಕ್ಕಮಗಳೂರು ಬಸವನಹಳ್ಳಿ ಸಮೀಪ ವಿಶ್ವಕರ್ಮ ಸಮುದಾಯ ಭವನದಲ್ಲಿ ಎಂಎಸ್‌ಎAಇ ಅಭಿವೃದ್ದಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಏರ್ಪಡಿಸಿದ್ದ ಪಿಎಂ ವಿಶ್ವಕರ್ಮ ಯೋಜನೆ ಕಾರ್ಯಾಗಾರವನ್ನು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮಹೇಶ್ ಉದ್ಘಾಟಿಸಿದರು. ಎಂ.ಶಶಿಕುಮಾರ್, ರವೀಂದ್ರ ಬೆಳವಾಡಿ, ಸಂತೋಷ್ ಕೋಟ್ಯಾನ್, ಮಹೇಶ್ ಮತ್ತಿತರರಿದ್ದರು. 
ಜಿಲ್ಲೆ

ಮೂಲ ಕಸುಬು ವೃತ್ತಿಗೆ ಕೇಂದ್ರ ಸರ್ಕಾರÀದ ಸಾಲ ಸೌಲಭ್ಯ

ಚಿಕ್ಕಮಗಳೂರು: ಕೇಂದ್ರ ಸರ್ಕಾರದ ಮಹತ್ವಕಾಂಕ್ಷಿ ಪಿಎಂ ವಿಶ್ವಕರ್ಮ ಯೋಜನೆಯಡಿ ಸಾವಿರಕ್ಕೂ ಹೆಚ್ಚು ಜಿಲ್ಲೆಯ ಫಲಾನುಭವಿಗಳಿಗೆ ಸುಮಾರು ೧೩.೫ ಕೋಟಿ ರೂ. ಸಾಲ ಸೌಲಭ್ಯ ಕಲ್ಪಿಸಿ ಆರ್ಥಿಕ ಸಬಲರಾಗಲು ಪ್ರೋತ್ಸಾಹ ನೀಡಲಾಗಿದೆ ಎಂದು ಜಿಲ್ಲಾ ಲೀಡ್ ಬ್ಯಾಂಕ್ ಮ್ಯಾನೇಜರ್ ಮಹೇಶ್ ತಿಳಿಸಿದರು.

ನಗರದ ಬಸವನಹಳ್ಳಿ ಸಮೀಪ ವಿಶ್ವಕರ್ಮ ಸಮುದಾಯ ಭವನದಲ್ಲಿ ಎಂಎಸ್‌ಎAಇ ಅಭಿವೃದ್ದಿ ಮತ್ತು ಸೌಲಭ್ಯ ಕಚೇರಿ ವತಿಯಿಂದ ಏರ್ಪಡಿಸಿದ್ದ ಪಿಎಂ ವಿಶ್ವಕರ್ಮ ಯೋಜನೆ ಕಾರ್ಯಾಗಾರವನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿದರು.

ಪೂರ್ವಿಕರ ೧೮ಕ್ಕೂ ಹೆಚ್ಚು ಮೂಲಕಸುಬನ್ನು ಮಾಡಿಕೊಂಡು ಬಂದಿರುವ ಜನಾಂಗಕ್ಕೆ ಪ್ರಸ್ತುತ ಆರ್ಥಿಕ ಸಹಾಯಹಸ್ತ ಇರಲಿಲ್ಲ. ಈ ಬಗ್ಗೆ ಕೇಂದ್ರ ಸರ್ಕಾರ ಕೂಲಂಕುಶವಾಗಿ ಪರಿಶೀಲಿಸಿ ಮೂಲ ಕಸುಬನ್ನು ಉಳಿಸುವ ನಿಟ್ಟಿನಲ್ಲಿ ವಿಶ್ವಕರ್ಮ ಯೋಜನೆ ಜಾರಿಗೆ ತಂದು ತರಬೇತಿ ನಂತರ ಆರ್ಥಿಕ ಸಹಾಯ ಧನ ಒದಗಿಸುತ್ತಿದೆ ಎಂದರು.

ಮೂಲ ಕಸುಬುದಾರರು ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಹರಿಗೆ ತರಬೇತಿ ನೀಡಿ ಪ್ರಮಾಣ ಪತ್ರ ವಿತರಿಸಲಾಗುವುದು. ತದನಂತರ ಬ್ಯಾಂಕ್‌ನಿAದ ವಾರ್ಷಿಕ ಶೇ. ೫ರ ಬಡ್ಡಿ ದರದಲ್ಲಿ ೫೦ ಸಾವಿರದಿಂದ ೨ ಲಕ್ಷ ರೂ.ವರೆಗೆ ಕಸುಬಿನ ಪರಿಕರ ಖರೀದಿಸಲು ಸಾಲ ನೀಡುವ ಯೋಜನೆ ಇದಾಗಿದೆ ಎಂದು ಮಾಹಿತಿ ನೀಡಿದರು.

ಈ ಯೋಜನೆಯಲ್ಲಿ ಅರ್ಜಿ ಸಲ್ಲಿಸುವವರು ಕೇಂದ್ರದ ಮುದ್ರಾ ಸೇರಿದಂತೆ ಯಾವುದೇ ಯೋಜನೆಯಲ್ಲಿ ಸಾಲ ಪಡೆದಿರಬಾರದು. ಕುಟುಂಬದ ಏಕಮಾತ್ರ ಸದಸ್ಯನಿಗೆ ಈ ಸೌಲಭ್ಯ ಅನ್ವಯ ಹಾಗೂ ಸರ್ಕಾರಿ ಹುದ್ದೆ ಹೊಂದಿರುವ ವ್ಯಕ್ತಿಗೆ ಸೌಲಭ್ಯ ಲಭಿಸುವುದಿಲ್ಲ. ಸಾಲ ಪಡೆದುಕೊಂಡ ಫಲಾನುಭವಿಗಳು ಸಮಯಕ್ಕೆ ಮರುಪಾವತಿಗೆ ಮುಂದಾದರೆ ಹೆಚ್ಚಿನ ಮೊತ್ತದಲ್ಲಿ ಸಾಲ ವಿತರಿಸಲಾಗುತ್ತದೆ ಎಂದರು.

ಎAಎಸ್‌ಎAಇ ಸಂಸ್ಥೆ ಸಹಾಯಕ ನಿರ್ದೇಶಕ ಜಿ.ನಾಗರಾಜ್ ಮಾತನಾಡಿ, ವಿಶ್ವಕರ್ಮ ಯೋಜನೆಯಲ್ಲಿ ಫಲಾನುಭವಿಗಳಿಗೆ ಯಾವುದೇ ಭದ್ರತೆ ಇಲ್ಲದೇ ನಿಯಮಿತ ದಾಖಲಾತಿಗಳ ಮುಖಾಂತರ ಸಾಲ ನೀಡುವ ಉz್ದೆÃಶ ಹೊಂದಲಾಗಿದೆ. ಈ ಮೂಲಕ ವೃತ್ತಿ ಕೌಶಲ್ಯತೆ ನಶಿಸದಂತೆ ಮಾಡಲು ಪ್ರಧಾನ ಮಂತ್ರಿಗಳು ಈ ಮಹತ್ವಾ ಪೂರ್ಣ ಯೋಜನೆ ಜಾರಿಗೊಳಿಸಿದ್ದಾರೆ ಎಂದು ಹೇಳಿದರು.

ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ರವೀಂದ್ರ ಬೆಳವಾಡಿ ಮಾತನಾಡಿ, ಮೂಲಕಸಬು ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ಅನುಷ್ಟಾನಗೊಳಿಸಿದೆ. ಆದರೆ ಕೆಲವು ಬ್ಯಾಂಕ್‌ಗಳು ಆರಂಭದಲ್ಲಿ ೧ ಲಕ್ಷ ರೂ. ಸಾಲ ವಿತರಿಸುವ ಬದಲಾಗಿ ಕೇವಲ ೫೦ ಸಾವಿರ ರೂ. ಸಾಲ ವಿತರಿಸುತ್ತಿರುವುದು ಸರಿಯಲ್ಲ. ಕೇಂದ್ರ ಸರ್ಕಾರದ ಆದೇಶನ್ವಯದಂತೆ ಬ್ಯಾಂಕ್ ನಿಯಮ ಪಾಲಿಸಬೇಕು ಎಂದು ಮನವಿ ಮಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಎಂಎಸ್‌ಎAಇ ಸಂಸ್ಥೆ ಜಂಟಿ ನಿರ್ದೇಶಕ ಎಂ. ಶಶಿಕುಮಾರ್, ದೇಶದಾದ್ಯಂತ ಮೂಲ ಕಸುಬುದಾರರ ಜೀವನ ಭದ್ರತೆ ಸುಧಾರಿಸಲು ಕೇಂದ್ರ ಸರ್ಕಾರ ೧೩ ಸಾವಿರ ಕೋಟಿ ರೂ. ಹಣವನ್ನು ವಿಶ್ವಕರ್ಮ ಯೋಜನೆಗೆ ಅನುದಾನ ಮೀಸಲಿಟ್ಟಿದೆ. ರಾಜ್ಯದಲ್ಲೂ ಈ ಯೋಜನೆ ಅಭಿವೃಧ್ದಿಗೆ ಹೆಚ್ಚಿನ ಒತ್ತು ನೀಡಿ, ಮೂಲಕಸುಬುದಾರರಿಗೆ ಸಹಾಯಹಸ್ತ ಚಾಚಿದೆ ಎಂದರು.

ಈ ಸಂದರ್ಭದಲ್ಲಿ ಪಿಎಂವಿ ಯೋಜನೆ ಜಿಲ್ಲಾ ಸದಸ್ಯ ಸಂತೋಷ್ ಕೋಟ್ಯಾನ್, ಜಿಲ್ಲಾ ಡಿಐಸಿ ಉಪನಿರ್ದೇಶಕ ಮಹೇಶ್, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಪ್ರಶಾಂತ್, ಸಿಎಸ್‌ಸಿ ಜಿಲ್ಲಾ ಸಂಯೋಜಕ ವಿಜಯಕುಮಾರ್, ಡಿಪಿಎಂಯು ರಾಕೇಶ್ ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.