ಕಲಬುರಗಿ: ಇಲ್ಲಿನ ಗುಲ್ಬರ್ಗ ವಿಶ್ವವಿದ್ಯಾಲಯವು ತನ್ನ 42 ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮೂವರು ಗಣ್ಯರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಿದೆ. ಆಗಷ್ಟ 12 ರಂದು ನಡೆಯುವ ವಿವಿಯ ವಾರ್ಷಿಕ ಘಟಿಕೋತ್ಸವದಲ್ಲಿ ಹಿರಿಯ ನ್ಯಾಯವಾದಿ ಅರ್ಚನಾ ಪ್ರದೀಪ ತಿವಾರಿ, ಹೋರಾಟಗಾರ ಲಕ್ಷ್ಮಣ ದಸ್ತಿ ಹಾಗೂ ಯಶಸ್ವಿ ಕೃಷಿ ಉದ್ಯಮಿ ಪೂಜ್ಯ ಲಿಂಗರಾಜಪ್ಪ ಬಸವರಾಜಪ್ಪ ಅಪ್ಪ ಅವರಿಗೆ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಗುತ್ತದೆ. ವಿವಿಯ ಸಿಂಡಿಕೇಟ್, ವಿದ್ಯಾ ವಿಷಯಕ ಪರಿಷತ್ ಸಭೆ ಹಾಗೂ ವಿಷಯ ತಜ್ಞರ ಸಮಿತಿ ಶಿಫಾರಸ್ಸಿನ ಮೇರೆಗೆ ರಾಜ್ಯಪಾಲರು ಮೂವರ ಗೌರವ ಡಾಕ್ಟರೇಟ್ ಗೆ ಅನುಮೋದನೆ ನೀಡಿದ್ದಾರೆ ಎಂದು ಗುಲ್ಬರ್ಗ ವಿವಿಯ ಕುಲಪತಿ ಪ್ರೊ ದಯಾನಂದ ಅಗಸರ ಪತ್ರಿಕಾಗೋಷ್ಠಿ ಯಲ್ಲಿ ತಿಳಿಸಿದರು.