ಚಾಮರಾಜನಗರ: ತಾಲೂಕಿನ ಹೊಂಗನೂರು ಗ್ರಾಮ ಪಂಚಾಯಿತಿ ಮುಂಭಾಗ ಆತ್ಮಹತ್ಯೆ ಮಾಡಿಕೊಂಡ ಚಿಕ್ಕೂಸನಾಯಕ ಕುಟುಂಬದವರು ಹಾಗೂ ನಾಯಕ ಸಮುದಾಯದ ಮುಖಂಡರು ಸೂಕ್ತ ಪರಿಹಾರಕ್ಕೆ ಒತ್ತಾಯಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಜಿಲ್ಲಾಡಳಿತ ಭವನದ ಮುಂಭಾಗ ಜಮಾಯಿಸಿದ ಪ್ರತಿಭಟನಾಕಾರರು, ಹೊಂಗನೂರು ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರ ವಿರುದ್ಧ ೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಈ ಸಂದರ್ಭದಲ್ಲಿ ಮುಖಂಡ ಪು.ಶ್ರೀನಿವಾಸ್‌ನಾಯಕ ಮಾತನಾಡಿ, ಚಿಕ್ಕೂಸನಾಯಕ ಆತ್ಮಹತ್ಯೆ ಮಾಡಿಕೊಳ್ಳಲು ಪಿಡಿಓ ಮತ್ತು ಗ್ರಾ.ಪಂ ಅಧ್ಯಕ್ಷರು ನೇರಕಾರಣರಾಗಿದ್ದಾರೆ. ಆದರೆ ಗ್ರಾ.ಪಂ ಅಧ್ಯಕ್ಷರ ಮೇಲೆ ಎ್ಐಆರ್ ದಾಖಲು ಮಾಡದೇ ಪೊಲೀಸರು ದೌರ್ಜನ್ಯ ಎಸಗಿದ್ದಾರೆ. ಕೂಡಲೇ ಗ್ರಾ.ಪಂ ಅಧ್ಯಕ್ಷರ ಮೇಲೆ ಎ್ಐಆರ್ ದಾಖಲಾಗಬೇಕು. ಕುಟುಂಬದಲ್ಲಿ ಒಬ್ಬರಿಗೆ ಸರ್ಕಾರಿ ನೌಕರಿಯನ್ನು ನೀಡಬೇಕು. ಕುಟುಂಬದವರಿಗೆ 50 ಲಕ್ಷ ರೂ, ಪರಿಹಾರವನ್ನು ನೀಡಬೇಕು ಎಂದು ಒತ್ತಾಯಿಸಿದರು.
ಪ್ರತಿಭಟನಾ ಸ್ಥಳಕ್ಕೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹಣಾಧಿಕಾರಿ ಮೋನಾರೋತ್ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಬಿ.ಟಿ.ಕವಿತಾ ಭೇಟಿ ನೀಡಿ, ಈಗಾಗಲೇ ಪಿಡಿಓ ಅವರನ್ನು ಅಮಾನತ್ತುಗೊಳಿಸಲಾಗಿದೆ. ಕುಟುಂಬದವರು ಮನವಿ ಸಲ್ಲಿಸಿದರೇ ಗ್ರಾ.ಪಂ ಅಧ್ಯಕ್ಷರ ಮೇಲೂ ದೂರು ದಾಖಲು ಮಾಡಲು ಕ್ರಮವಹಿಸುತ್ತೇವೆ. ಸರ್ಕಾರಿ ನೌಕರಿ ಹಾಗೂ ಪರಿಹಾರದ ಕುರಿತು ಕ್ರಮಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು. ಈ ವೇಳೆ ನಾಯಕ ಸಮುದಾಯದ ಮುಖಂಡರು ಹಾಗೂ ಕುಟುಂಬದವರು ಹಾಜರಿದ್ದರು.