ಬಾಗಲಕೋಟೆ: ಕಟ್ಟಡ ಮತ್ತು ಅಸಂಘಟಿತ ಕಾರ್ಮಿಕರಿಗೆ ವಿವಿಧ ಸೌಲಭ್ಯ ಹಾಗೂ ಅಪಘಾತದಿಂದ ಮರಣ ಹೊಂದಿದ ಚಾಲಕನ ಕುಟುಂಬಕ್ಕೆ ೫ ಲಕ್ಷ ರೂ.ಗಳ ಚೆಕ್‌ನ್ನು ಶಾಸಕರು ಆಗಿರುವ ಬಿಟಿಡಿಎ ಅಧ್ಯಕ್ಷ ಎಚ್.ವೈ.ಮೇಟಿ ವಿತರಿಸಿದರು.
ತಾಲೂಕಿನ ರಾಂಪುರ ಗ್ರಾಮದ ಸಭಾಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಮತ್ತು ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ ಸಹಯೋಗದಲ್ಲಿ ಹಮ್ಮಿಕೊಂಡ ವಿವಿಧ ಸೌಲಭ್ಯಗಳ ಹಾಗೂ ಬೃಹತ್ ನೋಂದಣಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರ ಕೊಡಮಾಡುವ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು. ಈ ಸಂದರ್ಭದಲ್ಲಿ ಶ್ರಮ ಮತ್ತು ಪಿಎಂಎಸ್ ಪಿಂಚಣಿ ಕಾರ್ಡ್ಗಳನ್ನು ಸಹ ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾಽಕಾರಿ ಜಾನಕಿ ಕೆ.ಎಂ, ತಹಸೀಲ್ದಾರ ಅಮರೇಶ ಪಮ್ಮಾರ, ಜಿಲ್ಲಾ ಕಾರ್ಮಿಕ ಅಽಕಾರಿ ರಮೇಶ ಸುಂಬಡ ಸೇರಿದಂತೆ ರಾಂಪುರ ಗ್ರಾಮದ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಇತರರು ಉಪಸ್ಥಿತರಿದ್ದರು.