ಯಾದಗಿರಿ: ತಾಲೂಕಿನ ಜಿನಕೇರಾ ತಾಂಡಾದಲ್ಲಿ ಸೋಮವಾರ ಸಿಡಿಲಿಗೆ ಬಲಿಯಾದ ಕುಟುಂಬಸ್ಥರಿಗೆ ಶೀಘ್ರ ಸರ್ಕಾರದಿಂದ ಪರಿಹಾರ ಒದಗಿಸಿಕೊಡಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಭರವಸೆ ನೀಡಿದರು.
ಮಂಗಳವಾರ ಘಟನಾ ಸ್ಥಳಕ್ಕೆ ಅಧಿಕಾರಿಗಳ ತಂಡದೊAದಿಗೆ ಭೇಟಿ ನೀಡಿ ಮಾತನಾಡಿದ ಅವರು, ಈ ವೇಳೆ ಗಾಯಗೊಂಡವರಿಗೆ ಸರ್ಕಾರದಿಂದ ಸೂಕ್ತ ಚಿಕಿತ್ಸೆ ಕೊಡಿಸಲಾಗುವುದು ಎಂದು ಹೇಳಿದರು.
ನಂತರ ತಾಂಡಾದ ನಿವಾಸಿಗಳಿಂದ ಘಟನೆ ಕುರಿತು ಸಮಗ್ರ ಮಾಹಿತಿ ಪಡೆದರು. ಜಿಲ್ಲಾಸ್ಪತ್ರೆ ಮತ್ತು ಇತರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಗಾಯಾಳುಗಳ ಕುಟುಂಬಸ್ಥರಿಗೆ ಧೈರ್ಯ ತುಂಬಿದರು. ನಿಮ್ಮ ಜತೆ ನಾವಿz್ದೆÃವೆ. ಆದಷ್ಟು ಬೇಗ ಸರ್ಕಾರದಿಂದ ಪರಿಹಾರ ಒದಗಿಸಿಕೊಡಲಾಗುವುದು ಎಂದು ಹೇಳಿದರು.
ಯಾದಗಿರಿ: ತಾಲ್ಲೂಕಿನ ಜಿನಕೇರಾ ತಾಂಡಾದಲ್ಲಿ ಸಿಡಿಲು ಬಡಿದು ೪ ಜನ ಸಾವನ್ನಪ್ಪಿದ್ದರು, ಮಂಗಳವಾರ ಬೆಳಿಗ್ಗೆ ೧೧ಕ್ಕೆ ರಾಜ್ಯ ಸಣ್ಣ ಕೈಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪೂರ ಅಧಿಕಾರಿಗಳ ತಂಡದೊAದಿಗೆ ಘಟನಾ ಸ್ಥಳಕ್ಕೆ ತೆರಳಿ, ಅಲ್ಲಿ ನೆರೆದಿದ್ದ ಜನರಿಗೆ ಸಾಂತ್ವನ ಹೇಳಿದರು.
ಒಂದೇ ಸ್ಥಳದಲ್ಲಿ ನಾಲ್ವರು ಸಿಡಿಲಿಗೆ ಬಲಿಯಾಗಿರುವದನ್ನು ತಿಳಿದು ದಿಗ್ಭಾಂತರಾಗಿ ಎಲ್ಲರನ್ನು ಸಮಾಧಾನ ಪಡಿಸಿ, ಅಂತ್ಯಕ್ರಿಯೆ ನೆರವೇರಿಸಲು ಒಂದು ಲಕ್ಷ ರೂ. ಆರ್ಥಿಕ ಸಹಾಯ ನೀಡಿದರು. ಈ ವೇಳೆ ಜಿಲ್ಲಾಧಿಕಾರಿ ಡಾ.ಸುಶೀಲಾ, ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್, ತಹಸೀಲ್ದಾರ್ ಸುರೇಶ ಅಂಕಲಗಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಬಸರಡ್ಡಿ ಪಾಟೀಲ್ ಅನಪುರ, ಯುಡಾ ಅಧ್ಯಕ್ಷ ವಿನಾಯಕ ಮಾಲಿ ಪಾಟೀಲ್, ಶರಣಿಕ ಕುಮಾರ ದೊಕಾ, ಸಿಪಿಐ ಸುನೀಲ್ ಮೂಲಿಮನಿ, ಪಿಎಸ್‌ಐ ಹಣಮಂತ ಬಂಕಲಗಿ, ಚಿದಾನಂದಪ್ಪ ಕಾಳೆಬೆಳಗುಂದಿ, ಬಸ್ಸುಗೌಡ ಬಿಳ್ಹಾರ, ನಾಗನಗೌಡ ಹಳಿಗೇರಾ, ಪರಶುರಾಮ ಜಾಧವ್, ವಿಜಯ ಜಾಧವ್, ಹೇಮಾ ಇತರರಿದ್ದರು.