ಹನೂರು ತಾಲೂಕಿನ ಮಂಗಲ ಗ್ರಾಮದಲ್ಲಿ ಮೃತ್ತಿಕೆ ಸಂಗ್ರಹಣಾ ಅಭಿಯಾನದ ರಥಕ್ಕೆ ಪೂಜೆ ಸಲ್ಲಿಲಾಯಿತು.ಆರ್.ನರೇಂದ್ರ, ಆನಂದಯ್ಯ, ಶ್ರೀನಿವಾಸ್ ಇತರರು ಇದ್ದರು.  
ಜಿಲ್ಲೆ

ಮೃತ್ತಿಕೆ ಸಂಗ್ರಹ ಅಭಿಯಾನ ರಥಕ್ಕೆ ಬೀಳ್ಕೊಡುಗೆ


ಮಂಗಲ ಗ್ರಾಮದಲ್ಲಿ ಶಾಸಕ ಆರ್.ನರೇಂದ್ರ ಸಮ್ಮುಖದಲ್ಲಿ ಪೂಜೆ


ಹನೂರು: ನಾಡಪ್ರಭು ಕೆಂಪೇಗೌಡ ಕಂಚಿನ ಪ್ರತಿಮೆ ಅನಾವರಣ ಹಿನ್ನೆಲೆಯಲ್ಲಿ ತಾಲೂಕಿಗೆ ಆಗಮಿಸಿದ ಮೃತ್ತಿಕೆ (ಮಣ್ಣು) ಸಂಗ್ರಹ ಅಭಿಯಾನ ರಥಕ್ಕೆ ಸೋಮವಾರ ಮಂಗಲ ಗ್ರಾಮದಲ್ಲಿ ಶಾಸಕ ಆರ್.ನರೇಂದ್ರ ಅವರ ಸಮ್ಮುಖದಲ್ಲಿ ಪೂಜೆ ಸಲ್ಲಿಸಿ ಬೀಳ್ಕೊಡಲಾಯಿತು.

ತಾಲೂಕಿನ ವಿವಿಧ ಗ್ರಾಮಗಳಲ್ಲಿ ಸಂಚರಿಸಿ ಆಗಮಿಸಿದ ರಥಕ್ಕೆ ಮಂಗಲ ಗ್ರಾಮದಲ್ಲಿ ಮಹಿಳೆಯರು ಮಂಗಳವಾದ್ಯ ಸಮೇತ ಕುಂಭಕಳಸದೊಂದಿಗೆ ಸ್ವಾಗತಿಸಿದರು. ಬಳಿಕ ಗ್ರಾಮ ಪಂಚಾಯಿತಿ ಮುಂಭಾಗ ಪೂಜೆ ಸಲ್ಲಿಸಲಾಯಿತು.

ಶಾಸಕ ಅರ್.ನರೇಂದ್ರ ಮಾತನಾಡಿ, ಬೆಂಗಳೂರಿನ ದೇವನಹಳ್ಳಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬಳಿ ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಕಂಚಿನ ಪ್ರತಿಮೆಯನ್ನು ನ.11 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಅನಾವರಣಗೊಳಿಸಲಿದ್ದಾರೆ. ಈ ದಿಸೆಯಲ್ಲಿ ರಾಜ್ಯಾದ್ಯಂತ ಮೃತ್ತಿಗೆ ಸಂಗ್ರಹಣಾ ಅಭಿಯಾನ ಕೈಗೊಳ್ಳಲಾಗಿದ್ದು, ತಾಲೂಕಿಗೆ ಆಗಮಿಸಿದ ರಥವು 4 ದಿನ ಗ್ರಾಪಂ ವ್ಯಾಪ್ತಿಯ ಹಳ್ಳಿಗಳಲ್ಲಿ ಸಂಚರಿಸಿ ಮಣ್ಣನ್ನು ಸಂಗ್ರಹಿಸಿದೆ ಎಂದು ತಿಳಿಸಿದರು.

ತಹಸೀಲ್ದಾರ್ ಆನಂದಯ್ಯ, ತಾಪಂ ಇಒ ಶ್ರೀನಿವಾಸ್, ಗ್ರಾಪಂ ಅಧ್ಯಕ್ಷ ಜಿ.ಕನಕರಾಜು, ಪಿಡಿಒ ದೊರೆಯಾ, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಾಮಸ್ಥರು ಇದ್ದರು.