ಜಿಲ್ಲೆ

ಮೇ 31 ರಂದು ಬೃಹತ್ ಉದ್ಯೋಗ ಮೇಳ

ಚಾಮರಾಜನಗರ: ಮೈಸೂರಿನ ಜ್ಞಾನವಾಹಿನಿ ಶಿಕ್ಷಣ ಸಂಸ್ಥೆಯ ಮೈಸೂರ್ ಕಾಲೇಜ್ ಆ್ ಇಂಜಿನಿಯರಿಂಗ್ ಅಂಡ್ ಮ್ಯಾನೇಜ್‌ಮೆಂಟ್(ಮೈಸೆಮ್) ವತಿಯಿಂದ ಮೇ 31 ರಂದು ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ ಎಂದು ಕಾಲೇಜಿನ ್ಲೇಸ್‌ಮೆಂಟ್ ಆಫೀಸರ್ ಎಲ್.ಪ್ರಭುಸ್ವಾಮಿ ತಿಳಿಸಿದರು.

ಮೈಸೂರಿನ ಜ್ಞಾನವಾಹಿನಿ ಶಿಕ್ಷಣ ಸಂಸ್ಥೆಯ ಕಾಲೇಜು ಆವರಣದಲ್ಲಿ ಬೆಳಗ್ಗೆ 8.30 ರಿಂದ ಸಂಜೆ 6 ಗಂಟೆಯ ತಕನ ಉದ್ಯೋಗ ಮೇಳ ನಡೆಯಲಿದೆ. ಸುಮಾರು 60 ಕ್ಕೂ ಹೆಚ್ಚು ಕಂಪನಿಗಳು ಮೇಳದಲ್ಲಿ ಭಾಗವಹಿಸಲಿವೆ. 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದು. ನೋಂದಣಿ ಮಾಡಿಕೊಂಡಿರುವ ವಿದ್ಯಾರ್ಥಿಗಳಿಗೆ ಹಲವು ಕಡೆಗಳಲ್ಲಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಗೋಷ್ಠಿಯಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಎಂ.ಎಸ್.ಪ್ರಭುಸ್ವಾಮಿ, ಮಹದೇವಸ್ವಾಮಿ, ಚೇತನ್ ಹಾಜರಿದ್ದರು.