ಜಮಖಂಡಿ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಸೋಮವಾರ ಪರಿಶಿಷ್ಟ ಜಾತಿಯ ಒಳಮೀಸಲಾಗಿ ಸಮಗ್ರ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಚಾಲನೆ ನೀಡಿದರು. ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ, ಕ್ಷೇತ್ರ ಶಿಕ್ಷಣಾಽಕಾರಿ ಎ.ಕೆ.ಬಸಣ್ಣವರ ಸೇರಿದಂತೆ ಸಮೀಕ್ಷಾದಾರರ ತಂಡ ಸದಸ್ಯರು ಉಪಸ್ಥಿತರಿದ್ದರು. 
ಜಿಲ್ಲೆ

ಮೇ ೧೭ ವರೆಗೆ ಪರಿಶಿಷ್ಟ ಜಾತಿಯ ಒಳಮೀಸಲಾತಿಗಾಗಿ ಸಮೀಕ್ಷೆ

ಸಂತೋಷ ದೇಶಪಾಂಡೆ

ಬಾಗಲಕೋಟೆ: ಜಿಲ್ಲೆಯಾದ್ಯಂತ ಮೇ ೫ ರಿಂದ ೧೭ ವರೆಗೆ ಹಮ್ಮಿಕೊಂಡಿವ ಪರಿಶಿಷ್ಟ ಜಾತಿಯ ಒಳಮೀಸಲಾಗಿ ಸಮಗ್ರ ಸಮೀಕ್ಷೆಗೆ ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ.ತಿಮ್ಮಾಪೂರ ಜಮಖಂಡಿ ತಾಲೂಕಿನ ಕೊಣ್ಣೂರು ಗ್ರಾಮದಲ್ಲಿ ಸೋಮವಾರ ಚಾಲನೆ ನೀಡಿದರು.

ಈ ಕುರಿತು ಮಾತನಾಡಿದ ಅವರು, ನ್ಯಾ. ನಾಗಮೋಹನ ದಾಸ್ ಏಕಸದಸ್ಯತ್ವ ವಿಚಾರಣಾ ಆಯೋಗ ಶಿಫಾರಸ್ಸಿನಂತೆ ರಾಜ್ಯಾದ್ಯಂತ ಪರಿಶಿಷ್ಟ ಜಾತಿಯ ಒಳಮೀಸಲಾತಿಯ ನಿಖರ ಮಾಹಿತಿಗಾಗಿ ಸಮಗ್ರ ಸಮೀಕ್ಷೆ ಕೈಗೊಳ್ಳಲಾಗಿದೆ. ಸಮೀಕ್ಷಾದಾರರು ಮನೆ ಮನೆಗಳಿಗೆ ಬರಲಿದ್ದು, ಸಮಗ್ರ ಮಾಹಿತಿಯನ್ನು ಒದಗಿಸುವಂತೆ ಪರಿಶಿಷ್ಟ ಜಾತಿಯ ಜನರಲ್ಲಿ ಕೋರಿದರು.

ಪರಿಶಿಷ್ಟ ಜಾತಿ ಪಟ್ಟಿಯಲ್ಲಿನ ಜಾತಿಗಳಿಗೆ ನ್ಯಾಯಯುತ ಪ್ರಾತಿನಿಧ್ಯ ನೀಡಿ ಒಳ ಮೀಸಲಾತಿ ಜಾತಿ ಮಾಡಲು ಸರ್ಕಾರ ಬದ್ದವಾಗಿದೆ. ಉಪ ಜಾತಿಗೆ ಅನುಗುಣವಾಗಿ ಮೀಸಲಾಗಿ ಹಂಚಿಕೆ ಸೌಲಭ್ಯ ನೀಡುವ ಸಲುವಾಗಿ ಸಮೀಕ್ಷೆ ನಡೆಸಲಾಗುತ್ತಿದೆ. ಸಮೀಕ್ಷೆಯ ವೇಳೆಯಲ್ಲಿ ಪರಿಶಿಷ್ಟ ಜಾತಿಯವರು ತಮ್ಮ ಮೂಲ ಜಾತಿ ಶಿಕ್ಷಣ, ವರಮಾನ, ಉದ್ಯೋಗ ಮತ್ತು ಇನ್ನಿತರ ಮಾಹಿತಿಯನ್ನು ತಪ್ಪದೇ ನೀಡಬೇಕು. ಸಮೀಕ್ಷೆಗೆ ಬರುವ ಸಮೀಕ್ಷೆದಾರರಿಗೆ ಸಹಕಾರ ನೀಡಲು ತಿಳಿಸಿದರು.

ಕಾರ್ಯಕ್ರಮದಲ್ಲಿ ಜಮಖಂಡಿ ಶಾಸಕ ಜಗದೀಶ ಗುಡಗುಂಟಿ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ, ಕ್ಷೇತ್ರ ಶಿಕ್ಷಣಾಽಕಾರಿ ಎ.ಕೆ.ಬಸಣ್ಣವರ ಸೇರಿದಂತೆ ಸಮೀಕ್ಷಾದಾರರ ತಂಡ ಸದಸ್ಯರು ಉಪಸ್ಥಿತರಿದ್ದರು.