ಬಾಗಲಕೋಟೆ ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಬುಧವಾರ ಜಿಲ್ಲಾಽಕಾರಿ ಪಿ.ಸುನೀಲಕುಮಾರ ಅಧ್ಯಕ್ಷತೆಯಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವಭಾವಿ ಸಭೆ ಜರುಗಿತು. ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಪ್ಪ, ಅಪರ ಜಿಲ್ಲಾಽಕಾರಿ ರಮೇಶ ಕಳಸದ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅಮರೇಶ ಪಮ್ಮಾರ ಇದ್ದರು. 
ಜಿಲ್ಲೆ

ಮೇ ೨೦-೨೧ ರಂದು ಸಾಮಾನ್ಯ ಪ್ರವೇಶ ಪರೀಕ್ಷೆ

ಬಾಗಲಕೋಟೆ: ಜಿಲ್ಲೆಯಲ್ಲಿ ಮೇ ೨೦ ಮತ್ತು ೨೧ ರಂದು ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ನಡೆಯಲಿದ್ದು, ಬಾಗಲಕೋಟೆ ನಗರದಲ್ಲಿ ೧೦ ಮತ್ತು ಜಮಖಂಡಿ ನಗರದಲ್ಲಿ ೫ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಽಕಾರಿ ಪಿ.ಸುನೀಲಕುಮಾರ ಹೇಳಿದರು.

ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸಾಮಾನ್ಯ ಪ್ರವೇಶ ಪರೀಕ್ಷೆ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಬಾಗಲಕೋಟೆ ನಗರದ ೧೦ ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು ೪೭೧೯ ವಿದ್ಯಾರ್ಥಿಗಳು ಮತ್ತು ಜಮಖಂಡಿ ನಗರದ ೫ ಪರೀಕ್ಷಾ ಕೇಂದ್ರಗಳಲ್ಲಿ ೨೬೯೮ ವಿದ್ಯಾರ್ಥಿಗಳು ಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಗಳು ಸುಸೂತ್ರವಾಗಿ ನಡೆಸುವ ನಿಟ್ಟಿನಲ್ಲಿ ಪ್ರತಿ ಕೇಂದ್ರಕ್ಕೆ ಒಬ್ಬರಂತೆ ೧೫ ಜನ ವೀಕ್ಷಕರನ್ನು ನೇಮಕ ಮಾಡಲಾಗಿದೆ ಎಂದರು.

ನೇಮಕಗೊಂಡ ವೀಕ್ಷಕರು ಉಪಮುಖ್ಯ ಅಽÃಕ್ಷಕರು, ಪ್ರಶ್ನೆ ಪತ್ರಿಕೆ ಪಾಲಕರು ಹಾಗೂ ವಿಶೇಷ ಜಾಗೃತ ದಳದ ಸದಸ್ಯರು ಕರ್ತವ್ಯದ ಬಗ್ಗೆ ಮೇಲ್ವಿಚಾರಣೆ ಮಾಡಬೇಕು. ಪರೀಕ್ಷೆ ಪ್ರಾರಂಭವಾಗುವ ಒಂದು ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರದಲ್ಲಿ ಹಾಜರಿದ್ದು, ತಮಗೆ ವಹಿಸಿದ ಕೆಲಸಗಳನ್ನು ಜವಾಬ್ದಾರಿಯಿಂದ ನಿರ್ವಹಿಸಲು ಸೂಚಿಸಿದರು. ತಹಸೀಲ್ದಾರ ನೇತೃತ್ವದಲ್ಲಿ ಕ್ಷೇತ್ರ ಶಿಕ್ಷಣಾಽಕಾರಿಗಳು, ಸರ್ಕಾರಿ ಕಾಲೇಜುಗಳ ಪ್ರಾಚಾರ್ಯರನ್ನೊಳಗೊಂಡ ೪ ತಂಡಗಳನ್ನು ನೇಮಿಸಿದ್ದು, ತಂಡಗಳು ನಿಗದಿತ ಅವಽಯಲ್ಲಿ ಪರೀಕ್ಷಾ ಕೇಂದ್ರಕ್ಕೆ ಪ್ರಶ್ನೆ ಪತ್ರಿಕೆ ತಲುಪಿಸುವ ಕೆಲಸವಾಗಬೇಕು ಎಂದರು.

ಪ್ರಶ್ನೆ ಪತ್ರಿಕೆ ಪಾಲಕರು ತಮಗೆ ವಹಿಸಿದ ಕೆಲಸವನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು. ಜಿಲ್ಲೆಯ ೧೫ ಪರೀಕ್ಷಾ ಕೇಂದ್ರಗಳಿಗೆ ಸೂಕ್ತ ಪೊಲೀಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗುತ್ತಿದೆ. ಪ್ರಶ್ನೆ ಪತ್ರಿಕೆ ಸಾಗಾಣಿಕೆ ತಂಡಕ್ಕೆ ಎಸ್ಕಾರ್ಟ ವ್ಯವಸ್ಥೆ, ಪರೀಕ್ಷಾ ಕೇಂದ್ರದ ಸುತ್ತ ನಿಷೇಽತ ಪ್ರದೇಶವೆಂದು ಘೋಷಿಸಲಾಗುತ್ತಿದ್ದು, ಈ ಪ್ರದೇಶದ ಸುತ್ತ ಮುತ್ತ ಇರುವ ಝರಾಕ್ಸ ಅಂಗಡಿಗಳನ್ನು ಮುಚ್ಚಿಸಲು ಕ್ರಮ ಕೈಗೊಳ್ಳಬೇಕು. ಪರೀಕ್ಷೆಗೆ ಮೊಬೈಲ್, ಇಲೆಕ್ಟ್ರಿಕಲ್ ವಾಚ್, ಕ್ಯಾಲ್ಕುಲೇಟರ್ ಸೇರಿದಂತೆ ಇತರೆ ಇಲೆಕ್ಟ್ರಾನಿಕ್ಸ್ ಉಪಕರಣಗಳನ್ನು ತರುವುದನ್ನು ನಿಷೇಽಸಲಾಗಿದೆ. ಪರೀಕ್ಷಾರ್ಥಿಗಳು ಎನ್-೯೫ ಮಾಸ್ಕ ಬಳಸುವಂತಿಲ್ಲ. ನಾರ್ಮಲ್ ಮಾಸ್ಕ ಮಾತ್ರ ಬಳಸಲು ಕ್ರಮವಹಿಸಬೇಕು ಎಂದರು.

ಸಭೆಯಲ್ಲಿ ಅಪರ ಜಿಲ್ಲಾಽಕಾರಿ ರಮೇಶ ಕಳಸದ, ಉಪವಿಭಾಗಾಽಕಾರಿ ಶ್ವೇತಾ ಬೀಡಿಕರ, ತಹಸೀಲ್ದಾರ ಅಮರೇಶ ಪಮ್ಮಾರ ಸೇರಿದಂತೆ ಪರೀಕ್ಷಾ ಮುಖ್ಯ ಅಽÃಕ್ಷಕರು, ವೀಕ್ಷಕರು ಉಪಸ್ಥಿತರಿದ್ದರು.