ಮೈಸೂರು: ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಮೈಕ್ರೋ ಫೈನಾನ್ಸ್ ಕಂಪನಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಒನಕೆ ಹಿಡಿದು ವಿನೂತನವಾಗಿ ಪ್ರತಿಭಟಿಸಿದರು.
ನಗರದ ಹಾರ್ಡಿಂಗ್ ವೃತ್ತದ ಬಳಿ ಭಾನುವಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನೆರೆ ರಾಜ್ಯಗಳ ಕಪ್ಪು ಹಣ ತಂದು ರಾಜ್ಯದ ಜನರಿಗೆ ಹಿಂಸೆ ಕೊಡುತ್ತಿರುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಜರುಗಿಸಬೇಕು. ರಾಜ್ಯದಲ್ಲಿ ತಲೆ ಎತ್ತಿರುವ ಅಕ್ರಮ ಫೈನಾನ್ಸ್ ಕಂಪನಿಗಳನ್ನೂ ಬಂದ್ ಮಾಡಿಸಬೇಕು.
ಈ ಕಂಪನಿಗಳ ವಿರುದ್ಧ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ವಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಕರ್ನಾಟಕ ಬಂದ್ ಮಾಡಬೇಕಾಗುತ್ತದೆ ಎಂದು ಎಚ್ಚರಿಸಿದರು.
ಇಡಿ (ಜಾರಿ ನಿರ್ದೇಶನಾಲಯ) ಅಧಿಕಾರಿಗಳಿಗೆ ತಾಕತ್ತಿದ್ದರೆ ಮೈಕ್ರೋ ಫೈನಾನ್ಸ್ ಕಂಪನಿಗಳ ಮೇಲೆ ದಾಳಿ ವಾಡಿ. ಇವುಗಳು ಸಾಲಗಾರರ ಮೇಲೆ ಮಾಡುತ್ತಿರುವ ದೌರ್ಜನ್ಯವನ್ನು ನಿಲ್ಲಿಸಲಿ ಎಂದು ಆಗ್ರಹಿಸಿ ಅವರು, ಈ ಕಂಪನಿಗಳ ಕಿರುಕುಳದಿಂದ ಆತ್ಮಹತ್ಯೆ ವಾಡಿಕೊಂಡ ಕುಟುಂಬದವರಿಗೆ 1 ಕೋಟಿ ರೂ. ಪರಿಹಾರ ಕೊಡಬೇಕು ಎಂದು ಒತ್ತಾಯಿಸಿದರು.
ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಮತ್ತೆ ತಾರತಮ್ಯ ಆಗಿದೆ. ನಮ್ಮ ಸಂಸದರಿಗೆ ಮಾನ ಮರ್ಯಾದೆ ಇಲ್ಲ. ಎಚ್.ಡಿ.ಕುವಾರಸ್ವಾಮಿ ಊರಲ್ಲಿರುವುದೆಲ್ಲ ವಾತಾಡ್ತಾರೆ, ಇದರ ಬಗ್ಗೆ ಏಕೆ ಮಾತನಾಡುತ್ತಿಲ್ಲ. ಪ್ರಲ್ಹಾದ್ ಜೋಶಿ, ಶೋಭಾ ಕರಂದ್ಲಾಜೆ ಅವರು ಸಹ ಏಕೆ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಧಿಕಾರದಿಂದ ತೆಗೆಯಲು ಜೆಡಿಎಸ್, ಬಿಜೆಪಿ ಮತ್ತು ಕಾಂಗ್ರೆಸ್‌ನ ಕೆಲವರು ಪಿತೂರಿ ವಾಡುತ್ತಿದ್ದಾರೆ. ಅವರು ಯಾವುದೇ ಕಾರಣಕ್ಕೂ ರಾಜೀನಾಮೆ ಕೊಡಬಾರದು ಎಂದು ಹೇಳಿದರು.