ಪಾಂಡವಪುರ: ರಾಜ್ಯ ಕಾಂಗ್ರೆಸ್ ಸರ್ಕಾರದ ಮಹತ್ವಾಕಾಂಕ್ಷೆ ಗ್ಯಾರಂಟಿಗಳಲ್ಲೊಂದಾದ ಗೃಹಲಕ್ಷ್ಮೀ ಯೋಜನೆ ಲೋಕಾರ್ಪಣೆ ಕಾರ್ಯಕ್ರಮಕ್ಕಾಗಿ ಮೈಸೂರಿಗೆ ತೆರಳುತ್ತಿದ್ದ ವಾಹನಗಳಿಗೆ ಶಾಸಕ ದರ್ಶನ್ ಪುಟ್ಟಣ್ಣಯ್ಯ ಬುಧವಾರ ಚಾಲನೆ ನೀಡಿದರು.
ಗೃಹಲಕ್ಷ್ಮೀ ಯೋಜನೆಯಡಿಯಲ್ಲಿ ಸುಮಾರು 1.10 ಕೋಟಿ ಮನೆ ಯಜಮಾನಿಯರು ಫಲಾನುಭವಿಗಳಾಗಲಿದ್ದಾರೆ ಎಂದು ತಿಳಿಸಿದರು.
ತಹಸೀಲ್ದಾರ್ ಎಸ್.ಸಂತೋಷ್, ತಾಪಂ ಇಒ ಲೋಕೇಶ್‌ಮೂರ್ತಿ, ಪುರಸಭೆ ಮುಖ್ಯಾಧಿಕಾರಿ ವೀಣಾ, ಸದಸ್ಯ ಪಾರ್ಥಸಾರಥಿ, ರೈತಸಂಘ ಮುಖಂಡರಾದ ಕನಗೋನಹಳ್ಳಿ ಪರಮೇಶ್‌ಗೌಡ, ದೊಡ್ಡಿಘಟ್ಟ ಸುರೇಶ್ ಇತರರು ಇದ್ದರು.