ಜಿಲ್ಲೆ

ಮೈಸೂರಿನಲ್ಲಿ 101 ಜನರಿಗೆ ಕರೊನಾ

ಮೈಸೂರು: ಜಿಲ್ಲೆಯಲ್ಲಿ ಹೊಸದಾಗಿ 101 ಜನರಿಗೆ ಕರೊನಾ ಸೋಂಕು ತಗುಲಿರುವುದು ವರದಿಯಾಗಿದೆ. ಇದರೊಂದಿಗೆ ಕೋವಿಡ್ ಪ್ರಕರಣಗಳ ಸಂಖ್ಯೆ 50,448ಕ್ಕೆ ತಲುಪಿದೆ.
ಗುರುವಾರ 94 ಜನರು ರೋಗದಿಂದ ಚೇತರಿಸಿಕೊಂಡು ಮನೆಗೆ ತೆರಳಿದ್ದು, ಇಲ್ಲಿಯ ವರೆಗೂ 48,802 ಜನರು ರೋಗಮುಕ್ತರಾಗಿದ್ದಾರೆ. ಸಕ್ರಿಯ ಪ್ರಕರಣ ಸಂಖ್ಯೆ 652ಕ್ಕೆ ಇಳಿಕೆಯಾಗಿದೆ. ಸೋಂಕಿತ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ಇದರೊಂದಿಗೆ ಇಲ್ಲಿಯ ತನಕ 944 ಜನರು ಈ ರೋಗಕ್ಕೆ ಬಲಿಯಾಗಿದ್ದಾರೆ.