ಮೈಸೂರು: ಮೈಸೂರು ತಾಲೂಕಿನ ಚಿಕ್ಕಹಳ್ಳಿ ಗ್ರಾಮದ ಮನೆಯಲ್ಲಿ 7.8 ಲಕ್ಷ ರೂ. ಮೌಲ್ಯದ ನಗದು, ಚಿನ್ನಾಭರಣವನ್ನು ಕಳ್ಳರು ದೋಚಿದ್ದಾರೆ.
ಮನೆ ಮಾಲೀಕ ಮಾದಪ್ಪ ಅವರು ಮೇ 16ರಂದು ಕುಟುಂಬದೊಡನೆ ಮಂತ್ರಾಲಯಕ್ಕೆ ತೆರಳಿದ್ದರು. ಮೇ 18ಕ್ಕೆ ಮನೆಗೆ ಮರಳಿದ್ದಾರೆ.
ಈ ಸಂದರ್ಭದಲ್ಲಿ ಮನೆಯ ಬಾಗಿಲು ತೆರೆದಿದ್ದು, ಮನೆಯಲ್ಲಿ ಇಟ್ಟಿದ್ದ 4.8 ಲಕ್ಷ ರೂ. ನಗದು ಹಾಗೂ 3 ಲಕ್ಷ ರೂ. ಮೌಲ್ಯದ 90 ಗ್ರಾಂ ಚಿನ್ನಾಭರಣವನ್ನು ಕಳವು ಮಾಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.