ಜಿಲ್ಲೆ

ಮೈಸೂರಿನಲ್ಲಿ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಜಾಗ ಮಂಜೂರು

ಮೈಸೂರು: ಮೈಸೂರಿನಲ್ಲಿ ನಿರ್ಮಿಸಲು ಉದ್ದೇಶಿಸಿರುವ ಕಿದ್ವಾಯಿ ಕ್ಯಾನ್ಸರ್ ಆಸ್ಪತ್ರೆಗೆ ಜಾಗವನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದೆ.

ಮೈಸೂರು ತಾಲೂಕಿನ ಇಲವಾಲ ಹೋಬಳಿ ದಡದಕಲ್ಲಹಳ್ಳಿ ಗ್ರಾಮದ ಸರ್ವೇ ನಂಬರ್ 125ರಲ್ಲಿ 18 ಎಕರೆ ಜಮೀನು ನೀಡಿದೆ. ಇದು ಗೋಮಾಳ ಜಾಗವಾಗಿದ್ದು, ಈ ವ್ಯಾಪ್ತಿಯಿಂದ ಈ ಜಮೀನನ್ನು ಕೈಬಿಡಲಾಗಿದೆ.

ಮಾರುಕಟ್ಟೆ ಮೌಲ್ಯದ ಶೇ.50ರಷ್ಟು ದರ ವಿಧಿಸಿ ಕಿದ್ವಾಯಿ ಸ್ಮಾರಕ ಗಂಥಿ ಸಂಸ್ಥೆಗೆ ಅನುಮೋದನೆ ನೀಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯ ಹೆಸರಿನಲ್ಲಿ ಜಾಗವನ್ನು ಕಾಯ್ದಿರಿಸಲಾಗಿದೆ.

ಈ ಕುರಿತು ಕಂದಾಯ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಮೊಹಮ್ಮದ್ ಸುಲ್ತಾನ್ ಅವರು, ಮೈಸೂರು ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ.