ಮೈಸೂರು: ನಗರದ ಕಾರಂಜಿಕೆರೆ ಬಳಿ ಗುರುವಾರ ಸಂಭವಿಸಿದ ರಸ್ತೆ ಅಪಘಾತದಲ್ಲಿ ಗೌರಿಬಿದನೂರು ಮೂಲದ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬರು ಮೃತಪಟ್ಟಿದ್ದಾರೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರು ನಿವಾಸಿ ಸಿಂಗಪ್ಪ ಅವರ ಪುತ್ರ ರಾಧಾಕೃಷ್ಣ(26) ಮೃತ ದುರ್ದೈವಿ. ನಗರದ ಇಂಜಿನಿಯರಿಂಗ್ ಕಾಲೇಜೊಂದರಲ್ಲಿ ರಾಧಾಕೃಷ್ಣ ವ್ಯಾಸಂಗ ಮಾಡುತ್ತಿದ್ದರು. ಬೆಳಗ್ಗೆ ಬೈಕ್‌ನಲ್ಲಿ ಕಾಜೇಜಿಗೆ ತೆರಳುತ್ತಿದ್ದ ಸಂದರ್ಭ ಕಾರಂಜಿಕೆರೆ ಬಳಿಯ ಟ್ಯಾಂಕ್‌ಬಂಡ್ ರಸ್ತೆಯಲ್ಲಿ ಎದುರಿನಿಂದ ಬಂದ 10 ಚಕ್ರದ ಲಾರಿಗೆ ಡಿಕ್ಕಿ ಹೊಡೆದು ತೀವ್ರ ಸ್ವರೂಪದಲ್ಲಿ ಗಾಯಗೊಂಡು ಸ್ಥಳದಲ್ಲಿಯೇ ಕೊನೆಯುಸಿರೆಳೆದರು. ಸಿದ್ಧಾರ್ಥನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.