ಮೈಸೂರು: ಮೈಸೂರು ಅರಮನೆ ಬಳಿಯ ಮೈದಾನದಲ್ಲಿ ಶುಕ್ರವಾರ ಬೆಂಕಿ ಕಾಣಿಸಿಕೊಂಡಿದ್ದು, ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಲು ಯಶಸ್ವಿಯಾದರು.
ನಗರದ ಹಾರ್ಡಿಂಜ್ ವೃತ್ತದ ಬಳಿ ಇರುವ ಅರಮನೆಯ ಗೋಡೆಗೆ ಹೊಂದಿಕೊಂಡಿರುವ ಖಾಲಿ ಜಾಗದಲ್ಲಿ ಹುಲ್ಲುಗಳು ಬೆಳೆದುಕೊಂಡಿದ್ದು, ಬಿಸಿಲಿನ ತಾಪಕ್ಕೆ ಹುಲ್ಲು ಒಣಗಿ ಹೋಗಿತ್ತು. ಈ ಹುಲ್ಲಿಗೆ ಬೆಂಕಿ ತಗಲು ಸಂಪೂರ್ಣ ಸುಟ್ಟು ಕರಕಲಾಗಿದೆ. ಬೆಂಕಿ ಕಾಣಿಸಿಕೊಂಡಿರುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬೆಂಕಿಯನ್ನು ನಂದಿಸಿದರು.