ಮೈಸೂರು: ಇಲ್ಲಿನ ಪ್ರವಾಸೋದ್ಯಮದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಪ್ರವಾಸೋದ್ಯಮ ಸಚಿವ ಎಚ್.ಕೆ ಪಾಟೀಲ್ ತಿಳಿಸಿದರು.
ನಗರ ಚಾಮುಂಡಿಬೆಟ್ಟಕ್ಕೆ ಸೋಮವಾರ ಭೇಟಿ ನೀಡಿ ದೇವಿಯ ದರ್ಶನದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಡು ಸುಭೀಕ್ಷೆಯಾಗಲಿ, ಉತ್ತಮ ಮಳೆ, ಬೆಳೆಯಾಗಲೆಂದು ತಾಯಿಯಲ್ಲಿ ಬೇಡಿಕೊಂಡಿದ್ದೇನೆ.
ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಸಮೀಪಿಸುತ್ತಿದೆ. ಆದ್ದರಿಂದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ. ಪ್ರವಾಸೋದ್ಯಮ ಕುರಿತು ಅಧಿಕಾರಿಗಳ ಜತೆಗೆ ಸಭೆ ನಡೆಸಿ ಮಾಹಿತಿ ಪಡೆದುಕೊಳ್ಳಲಾಗುವುದು ಎಂದರು. ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಿರಿಯ ಅಧಿಕಾರಿಗಳು ಇದ್ದರು.