ಜಿಲ್ಲೆ

ಮೈಸೂರು ಮಹಾನಗರ ಪಾಲಿಕೆ: ಒಂದು ಲಕ್ಷ ಇ-ಖಾತಾ ವಿತರಣೆ ಮಾಡುವ ಗುರಿ

ಮಂಜುನಾಥ ತಿಮ್ಮಯ್ಯ

ಮೈಸೂರು: ಪಾಲಿಕೆ ವ್ಯಾಪ್ತಿಯಲ್ಲಿ ಒಂದು ಲಕ್ಷ ಇ-ಖಾತಾ ವಿತರಣೆ ಮಾಡುವ ಗುರಿ ಹಾಕಿಕೊಳ್ಳಲಾಗಿದೆ ಎಂದು ಮೈಸೂರು ಮಹಾನಗರ ಪಾಲಿಕೆ ಆಯುಕ್ತ ಶೇಖ್ ತನ್ವೀರ್ ಆಸೀಫ್ ಹೇಳಿದರು.

ಪಾಲಿಕೆ ವಲಯ ಕಚೇರಿ 2ರ ವತಿಯಿಂದ ವಿಶ್ವೇಶ್ವರ ನಗರದಲ್ಲಿ ಸೋಮವಾರ ಆಯೋಜಿಸಿದ್ದ ಇ-ಆಸ್ತಿ ಆಂದೋಲನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈಗಾಗಲೇ ಪಾಲಿಕೆ ವತಿಯಿಂದ 52,658 ಇ-ಖಾತಾ ವಿತರಿಸಲಾಗಿದ್ದು, ಈ ವರ್ಷಾಂತ್ಯದ ವೇಳೆಗೆ 1 ಲಕ್ಷ ಇ-ಖಾತೆ ವಿತರಿಸುವ ಗುರಿ ಹೊಂದಲಾಗಿದೆ ಎಂದು ತಿಳಿಸಿದರು.

ಪ್ರತಿ ಶುಕ್ರವಾರ ಎಲ್ಲ ವಲಯ ಕಚೇರಿಗಳಲ್ಲಿ ಮಧ್ಯಾಹ್ನ 3ರಿಂದ 5ರವರೆಗೆ ಜನಸ್ಪಂದನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.

ಪಾಲಿಕೆ ಉಪ ಆಯುಕ್ತ(ಕಂದಾಯ) ಸೋಮಶೇಖರ್, ವಲಯ ಆಯುಕ್ತ ಜಿ.ಗಿರೀಶ್, ಪರಿಸರ ಇಂಜಿನಿಯರ್ ಮಹದೇವಮ್ಮ, ಕಂದಾಯಾಧಿಕಾರಿ ವೆಂಕಟೇಶ್, ಸಹಾಯಕ ಕಂದಾಯಾಧಿಕಾರಿ ವೆಂಕಟೇಶ್ ಇತರರು ಇದ್ದರು.