ಜಿಲ್ಲೆ

ಮೈಸೂರು-ವಾರಾಣಸಿ ರೈಲಿಗೆ ಹೆಚ್ಚುವರಿ ಬೋಗಿ

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ತೆರಳಲು ಮುಂದಾಗಿರುವ ಸಾರ್ವಜನಿಕರಿಗೆ ಒಂದು ಸಿಹಿ ಸುದ್ದಿ...!

ಮಹಾ ಕುಂಭಮೇಳಕ್ಕೆ ತೆರಳಲು ಮೈಸೂರು ಯಾತ್ರಾರ್ಥಿಗಳಿಗೆ ನೆರವಾಗಲೆಂದು ಮೈಸೂರು-ವಾರಾಣಸಿ ಎಕ್ಸ್‌ಪ್ರೆಸ್ ರೈಲಿಗೆ (22867) ಹೆಚ್ಚುವರಿ ಬೋಗಿ ಅಳವಡಿಸಬೇಕೆಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಮನವಿಗೆ ರೈಲ್ವೆ ಇಲಾಖೆ ಸ್ಪಂದಿಸಿದ್ದು, ಒಪ್ಪಿಗೆಯನ್ನೂ ನೀಡಿದೆ.

ಪ್ರಯಾಗರಾಜ್‌ನಲ್ಲಿ 144 ವರ್ಷಗಳಿಗೊಮ್ಮೆ ನಡೆಯುವ ಮಹಾಕುಂಭ ಮೇಳಕ್ಕೆ ಮೈಸೂರು-ಕೊಡಗು ಕ್ಷೇತ್ರದಿಂದ ತೆರಳುವ ಯಾತ್ರಿಗಳಿಗೆ ನೆರವಾಗಲೆಂದು ಹೆಚ್ಚುವರಿ ಬೋಗಿಗಳನ್ನು ಅಳವಡಿಸಬೇಕು ಎಂದು ರೈಲ್ವೆ ಇಲಾಖೆಗೆ ಸಂಸದ ಯದುವೀರ್ ಒಡೆಯರ್ ಪತ್ರ ಬರೆದು ಮನವಿ ಮಾಡಿದ್ದರು.

ಮೈಸೂರು-ವಾರಾಣಸಿ ಎಕ್ಸ್‌ಪ್ರೆಸ್ ರೈಲು ಪ್ರಯಾಗರಾಜ್ ಮೂಲಕ ಹಾದು ಹೋಗುತ್ತಿರುವ ಹಿನ್ನೆಲೆಯಲ್ಲಿ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿದರೆ ಅನುಕೂಲವಾಗುತ್ತದೆ. ಹೀಗಾಗಿ, ಹೆಚ್ಚುವರಿ ಕೋಚ್ ನೀಡಲು ಪತ್ರದಲ್ಲಿ ಒತ್ತಾಯಿಸಿದ್ದರು. ಇದಕ್ಕೆ ಸ್ಪಂದಿಸಿರುವ ರೈಲ್ವೆ ಇಲಾಖೆ, ಮೈಸೂರು-ವಾರಾಣಸಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿಯನ್ನು ಅಳವಡಿಸಲು ಸಮ್ಮತಿಸಿದೆ. ಹವಾ ನಿಯಂತ್ರಿತ ಕೋಚ್ ಅಳವಡಿಸಲಾಗುವುದು. ಮುಂದಿನ ೆ. 4ರಿಂದ ಮೈಸೂರು ವಾರಾಣಸಿ ಎಕ್ಸ್‌ಪ್ರೆಸ್ ರೈಲಿಗೆ ಹೆಚ್ಚುವರಿ ಬೋಗಿಯ ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುವುದು ಎಂದು ರೈಲ್ವೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಉತ್ತರಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳದಲ್ಲಿ ಭಾಗಿಯಾಗಿ ತೀರ್ಥ ಸ್ನಾನ ಮಾಡಲು ಮೈಸೂರಿನ ಅನೇಕರು ಆಸೆಪಡುತ್ತಿದ್ದಾರೆ. ನಮ್ಮ ಕ್ಷೇತ್ರದ ಜನರಿಗೆ ಅನುಕೂಲವಾಗಲೆಂದು ರೈಲ್ವೆ ಇಲಾಖೆಗೆ ಪತ್ರ ಬರೆದಿದ್ದೆ. ಅದಕ್ಕೆ ಇಲಾಖೆಯಿಂದ ಸ್ಪಂದನೆ ಸಿಕ್ಕಿದ್ದು, ೆಬ್ರವರಿಯಿಂದ ಹೆಚ್ಚುವರಿ ಬೋಗಿಗಳ ಸಂಚಾರ ಆರಂಭಿಸಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಸಂಸದ