ಬೀದರ್: ಕೊಡಗಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಕಾರಿನ ಮೇಲೆ ಬಿಜೆಪಿ ಕಾರ್ಯಕರ್ತರು ಮೊಟ್ಟೆ ಎಸೆದಿರುವುದನ್ನು ವಿಧಾನ ಪರಿಷತ್ ಮಾಜಿ ಸದಸ್ಯ ವಿಜಯಸಿಂಗ್ ಖಂಡಿಸಿದ್ದಾರೆ.
ಮಳೆ ಹಾನಿ ವೀಕ್ಷಣೆಗೆ ಕೊಡಗಿಗೆ ಭೇಟಿ ನೀಡಿದ್ದ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದದ್ದು ಭದ್ರತಾ ವೈಫಲ್ಯವಲ್ಲದೆ ಮತ್ತೇನೂ ಅಲ್ಲ. ರಾಜ್ಯದಲ್ಲಿ ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲದಿದ್ದರೆ ಜನಸಾಮಾನ್ಯರ ಗತಿ ಏನು ಎಂದು ಪ್ರಶ್ನಿಸಿದ್ದಾರೆ. ಕಾರಿನ ಮೇಲೆ ದಾಳಿ ನಡೆಸಿದ ಬಿಜೆಪಿ ಕಾರ್ಯಕರ್ತರ ವಿರುದ್ಧ ಕ್ರಮ ಜರುಗಿಸಬೇಕು. ಭದ್ರತಾ ಲೋಪಕ್ಕೆ ಮುಖ್ಯಮಂತ್ರಿ ಮತ್ತು ಗೃಹ ಸಚಿವರು ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ್ದಾರೆ.