ಚಿತ್ರದುರ್ಗ: ಚಿತ್ರದುರ್ಗ ನಗರಸಭೆ ಆಸ್ತಿ ತೆರಿಗೆ, ನೀರಿನ ಕರ ಹಾಗೂ ಇತರ ಶುಲ್ಕಗಳನ್ನು ಮೊಬೈಲ್ ಹಾಗೂ ಆನ್‌ಲೈನ್ ಮೂಲಕ ಪಾವತಿಸಲು ಅವಕಾಶ ಕಲ್ಪಿಸಲಾಗಿದೆ. ಮೊಬೈಲ್ ಅಪ್ಲಿಕೇಷನ್‌ಗಳಾದ ಭೀಮ್, ಭಾರತ್ ಬಿಲ್‌ಪೇ, ಫೋನ್‌ಪೇ, ಪೆಟಿಎಂ, ಗೂಗಲ್ ಪೇ ಗಳ ಮುಖಾಂತರ ಕರ ಪಾವತಿಸಬಹುದು. ಖಜಾನೆ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಯೂನಿಯನ್ ಬ್ಯಾಂಕ್, ಕೆನರಾಬ್ಯಾಂಕ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಶಾಖೆಗಳು ಹಾಗೂ ನಗರಸಭೆ ಕಚೇರಿಯಲ್ಲಿರುವ ಎಚ್‌ಡಿಎಫ್‌ಸಿ ಬ್ಯಾಂಕ್ ಕೌಂಟರ್‌ನಲ್ಲೂ ತೆರಿಗೆ ಪಾವತಿಸಬಹುದಾಗಿದೆ ಎಂದು ನಗರಸಭೆ ಆಯುಕ್ತೆ ಎಂ.ರೇಣುಕಾ ಕೋರಿದ್ದಾರೆ.