ಜಿಲ್ಲೆ

ಮೋದಿ ಬಡವರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ

ಚಿತ್ರದುರ್ಗ: ರಾಮ ಮಂದಿರವನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವ ಕೋಮುವಾದಿ ಬಿಜೆಪಿಯನ್ನು ಲೋಕಸಭಾ ಚುನಾವಣೆಯಲ್ಲಿ ಸೋಲಿಸ ಬೇಕಿದೆ ಎಂದು ಕೆಪಿಸಿಸಿ ಕಾರ್ಮಿಕ ವಿಭಾಗದ ಅಧ್ಯಕ್ಷ ಕೆ.ಪುಟ್ಟಸ್ವಾಮಿಗೌಡ ಹೇಳಿದರು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಏರ್ಪಡಿಸಿದ್ದ ಪಕ್ಷದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು,10 ವ ರ್ಷಗಳ ಕಾಲ ಅಧಿಕಾರ ನಡೆಸಿರುವ ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಮಿಕರ ಪರ ಕಾನೂನುಗಳೆಲ್ಲವನ್ನು ರದ್ದುಪಡಿಸಿ ಕಾರ್ಮಿಕ ರು,ಬಡವರು,ರೈತರ ಬದುಕಿನ ಜೊತೆ ಚಲ್ಲಾಟವಾಡುತ್ತಿದ್ದಾರೆ,ದೇಶದ ಅಭಿ ವೃದ್ಧಿಗಾಗಿ ಕಾಂಗ್ರೆಸ್ಸನ್ನು ಕೇಂದ್ರದಲ್ಲಿ ಅಧಿಕಾರಕ್ಕೆ ತರಬೇಕಿದೆ.
ಈ ನಿಟ್ಟಿನಲ್ಲಿ ಕಾರ್ಯಕರ್ತರು ಪ್ರತಿವಾರ್ಡ್ ಹಾಗೂ ಬೂತ್‌ಮಟ್ಟದಲ್ಲಿ ಮನೆ,ಮನೆಗೆ ತೆರಳಿ ಕಾಂಗ್ರೆಸ್ ಕಾರ‌್ಯಕ್ರಮಗಳನ್ನು ಜನರಿಗೆ ತಿಳಿಸಬೇಕು. ಕಾಂಗ್ರೆಸ್ ಅಭ್ಯರ್ಥಿ ಬಿ.ಎನ್. ಚಂದ್ರಪ್ಪ ಅವರನ್ನು ಗೆಲ್ಲಿಸಬೇಕೆಂದರು. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಂ.ಕೆ. ತಾಜ್‌ಪೀರ್,ಚೋ ಟು ಮತ್ತಿತರರು ಇದ್ದರು.