ಚಾಮರಾಜನಗರ: ಜಿಲ್ಲಾ ವ್ಯಾಪ್ತಿಯಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್‌ಗಳ ಮರು ಸಮೀಕ್ಷೆ ಹಮ್ಮಿಕೊಳ್ಳಲಾಗಿದೆ. ಈ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವವರು ನಿಗದಿತ ನಮೂನೆಯಲ್ಲಿ ವಿವರಗಳನ್ನು ಭರ್ತಿ ಮಾಡಿ ಅ.30 ರೊಳಗಾಗಿ ಸ್ವಯಂಘೋಷಣೆ ಮಾಡಿಕೊಳ್ಳಲು ಕೋರಲಾಗಿದೆ.
ಪೌರ ಕಾರ್ಮಿಕರು ಸಂಬಂಧಪಟ್ಟ ಗ್ರಾಮ ಪಂಚಾಯತಿ, ನಗರಸಭೆ, ಪುರಸಭೆ, ಕಚೆೇರಿಯಲ್ಲಿ ದೊರೆಯುವ ನಮೂನೆಯಲ್ಲಿ ವಿವರಗಳನ್ನು ಅ.30 ರೊಳಗಾಗಿ ಭರ್ತಿ ಮಾಡಿ ಅದೇ ಕಚೇರಿಗಳಿಗೆ ಸಲ್ಲಿಸಬೇಕು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.