ಬೀಳಗಿ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ಗೃಹಲಕ್ಷ್ಮಿ ಅನುಷ್ಠಾನಕ್ಕೆ ಶಾಸಕ ಜೆ.ಟಿ.ಪಾಟೀಲ ಚಾಲನೆ ನೀಡಿದರು. ತಹಸೀಲ್ದಾರ್ ಸುಹಾಸ ಇಂಗಳೆ, ಪಪಂ ಮುಖ್ಯಾಧಿಕಾರಿ ದೇವೀಂದ್ರ ಧನಪಾಲ ಇದ್ದರು. 
ಜಿಲ್ಲೆ

ಯೋಜನೆ ಸದ್ಬಳಕೆ ಆಗಲಿ

Vijayapura - Desk - Gurappa Lokuri

ಬೀಳಗಿ: ಚುನಾವಣೆ ವೇಳೆಯಲ್ಲಿ ರಾಜ್ಯದ ಜನರಿಗೆ ಕೊಟ್ಟ ಮಾತಿನಂತೆ 5 ಗ್ಯಾರಂಟಿಗಳ ಪ್ರಮುಖ ಯೋಜನೆ ಗೃಹಲಕ್ಷ್ಮಿಯೋಜನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಚಾಲನೆ ನೀಡಿದ್ದು, ಲಾನುಭವಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಜೆ.ಟಿ.ಪಾಟೀಲ ಹೇಳಿದರು.

ಸ್ಥಳೀಯ ತಹಸೀಲ್ದಾರ್ ಕಾರ್ಯಾಲಯದ ಆವರಣದಲ್ಲಿ ತಾಲೂಕು ಆಡಳಿತ ಮತ್ತು ಪಟ್ಟಣ ಪಂಚಾಯಿತಿ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಗೃಹಲಕ್ಷ್ಮಿಯೋಜನೆ ಅನುಷ್ಠಾನ ಸಮಾರಂಭಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಬೀಳಗಿ ಪಟ್ಟಣ ವ್ಯಾಪ್ತಿಯಲ್ಲಿ 3512 ಲಾನುಭವಿಗಳು ಇದರ ಲಾಭ ಪಡೆಯಲಿದ್ದಾರೆ. ಗೃಹಲಕ್ಷ್ಮಿ ಯೋಜನೆ 4ನೇ ಗ್ಯಾರಂಟಿ ಯೋಜನೆಯಾಗಿದೆ. ಡಿಸೆಂಬರ್‌ನಲ್ಲಿ 5ನೇ ಗ್ಯಾರಂಟಿ ಯೋಜನೆಗೆ ಚಾಲನೆ ನೀಡಲಾಗುತ್ತದೆ. ಪ್ರತಿ ಕುಟುಂಬ ಆರ್ಥಿಕ ಚೈತನ್ಯ ಹೊಂದಿ ಸ್ವಾವಲಂಬಿಗಳಾಗಿ ಬದುಕ ಬೇಕೆನ್ನುವುದು ಯೋಜನೆ ಮೂಲ ಉದ್ದೇಶವಾಗಿದೆ ಎಂದರು.

ತಹಸೀಲ್ದಾರ್ ಸುಹಾಸ ಇಂಗಳೆ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ದೇವಿಂದ್ರ ಧನಪಾಲ, ಸಿಡಿಪಿಒ ಬಸಲಿಂಗಪ್ಪ ಕವಟೆಕರ, ಪಟ್ಟಣ ಪಂಚಾಯಿತಿ ಸದಸ್ಯರಾದ ಪಡಿಯಪ್ಪ ಕರಿಗಾರ, ಅಜ್ಜುಬಾಯಿ ಸರ್ಕಾರ, ರುಕ್ಮವ್ವ ಗಚ್ಚಿನಮನಿ, ಅಜನಾಬೇಗಂ ಜುಮುನಾಳ, ಬೋರಮ್ಮ ಮೇಟಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಹನುಮಂತ ಕಾಖಂಡಕಿ, ಅಣವೀರಯ್ಯ ಪ್ಯಾಟಿಮಠ, ಮಹಾದೇವ ಹಾದಿಮನಿ, ಬಸವರಾಜ ಹಳ್ಳದಮನಿ, ಯಮನಪ್ಪ ರೊಳ್ಳಿ, ಜ್ಯೋತಿಬಾ ಹಾಗೂ ಇನ್ನೂ ಅನೇಕರು ಇದ್ದರು.