ಮೈಸೂರು: ನಗರದಲ್ಲಿ ಸ್ನಾತಕೋತ್ತರ ಪದವಿ ಅಧ್ಯಯನ ಮಾಡುತ್ತಿದ್ದ ಯಾದಗಿರಿ ಜಿಲ್ಲೆ ಮೂಲದ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಸಿದ್ದರಾಮೇಶ್ವರ (24) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ವಿ.ವಿ.ಯ ಸಮಾಜಶಾಸ್ತ್ರ ವಿಷಯದಲ್ಲಿ ಅಧ್ಯಯನ ಮಾಡುತ್ತಿದ್ದ. ಮಾನಸಗಂಗೋತ್ರಿ ಪುರುಷರ ವಿದ್ಯಾರ್ಥಿನಿಲಯದ ಬ್ಲಾಕ್ 1ರ ಕೊಠಡಿಯಲ್ಲಿ ಶನಿವಾರ ರಾತ್ರಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ. ಜಯಲಕ್ಷ್ಮೀಪುರಂ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.