ಜಿಲ್ಲೆ

ಯಾನಗಹಳ್ಳಿಯಲ್ಲಿ ಶಾಲೆ ಪ್ರಾರಂಭೋತ್ಸವ

ಚಾಮರಾಜನಗರ: ತಾಲೂಕಿನ ಯಾನಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಶುಕ್ರವಾರ ಆಚರಿಸಲಾಯಿತು.

ಗ್ರಾಮ ಪಂಚಾಯಿತಿ ಅಧ್ಯಕ್ಷೆ ಶ್ರುತಿ ಶಾಲಾ ಮಕ್ಕಳಿಗೆ ಸಿಹಿ ಹಾಗೂ ಗುಲಾಬಿ ಹೂ ವಿತರಿಸಿ ಶಾಲಾ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಸರ್ಕಾರಿ ಶಾಲೆಯಲ್ಲಿ ಮಾದರಿಯಾಗಿರುವ ಯಾನಗಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಅಗತ್ಯ ಸೌಲಭ್ಯಗಳನ್ನು ಹೊಂದಿದ್ದು ಸುತ್ತಮುತ್ತಲ ಗ್ರಾಮಸ್ಥರು ತಮ್ಮ ಮಕ್ಕಳನ್ನು ಈ ಶಾಲೆಗೆ ನೋಂದಾಯಿಸುವಂತೆ ಸಲಹೆ ನೀಡಿದರು. ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷ ರಂಗಸ್ವಾಮಿ, ಅರಕಲವಾಡಿ ಕ್ಲಸ್ಟರ್ ಸಿಆರ್‌ಪಿ ಬಸವಣ್ಣ, ಮುಖ್ಯ ಶಿಕ್ಷಕ ಸಿ.ಎಸ್.ಮಹದೇವಸ್ವಾಮಿ, ದೈಹಿಕ ಶಿಕ್ಷಣ ಶಿಕ್ಷಕ ಸದಾಶಿವಮೂರ್ತಿ, ಎಸ್‌ಡಿಎಂಸಿ ಸದಸ್ಯರು, ಗ್ರಾಮದ ಮುಖಂಡರು,ಪಾಲಕರು, ಶಿಕ್ಷಕರು ಇದ್ದರು.