ಸಾಂದರ್ಭಿಕ ಚಿತ್ರ  
ಜಿಲ್ಲೆ

ವಿಟಿಯು ಚಾಲಕ ಆತ್ಮಹತ್ಯೆಗೆ ಶರಣು

ಮೈಸೂರು: ನಗರದ ಸಾತಗಳ್ಳಿ ಬಡಾವಣೆಯಲ್ಲಿರುವ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಅಧ್ಯಯನ ಕೇಂದ್ರದಲ್ಲಿ ಕಾರು ಚಾಲನನಾಗಿದ್ದ ಮಾನಪ್ಪ (27) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಮೂಲತಃ ಯಾದಗಿರಿ ಜಿಲ್ಲೆಯ ಮಾನಪ್ಪ, ಐದು ವರ್ಷಗಳಿಂದ ಕಾರು ಚಾಲಕರಾಗಿ ಕಾರ್ಯ ನಿರ್ವಹಿಸುತ್ತಿದ್ದರು. ಉಳಿದುಕೊಳ್ಳಲು ಅಧ್ಯಯನ ಕೇಂದ್ರ ಆವರಣದಲ್ಲಿಯೇ ಕೊಠಡಿಯೊಂದನ್ನು ನೀಡಲಾಗಿತ್ತು. ಈ ಕೊಠಡಿಯಲ್ಲಿಸ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದು ಕಾರಣ ತಿಳಿದು ಬಂದಿಲ್ಲ ಎಂದು ಪ್ರಕರಣ ದಾಖಲಿಸಿಕೊಂಡಿರುವ ಮೈಸೂರು ಗ್ರಾಮಾಂತರ ಠಾಣೆ ಪೊಲೀಸರು ತಿಳಿಸಿದ್ದಾರೆ.