ಚಿಕ್ಕಮಗಳೂರು: ಆರ್ಟಿಫಿಷಿಯಲ್ ಇಂಟಲಿಜೆನ್ಸಿ ಬಗ್ಗೆ ಜಾಗೃತಿ ಮೂಡಿಸಲು ಹಾಗೂ ನಿರುದ್ಯೋಗಿ ಪದವೀಧರ ಯುವಕ-ಯುವತಿಯರಿಗೆ ಉದ್ಯೋಗಾವಕಾಶ ನೀಡಲು ಫೆ. ೧೫ರಂದು ಆದಿಚುಂಚನಗಿರಿ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸಂದರ್ಶನವನ್ನು ಏರ್ಪಡಿಸಲಾಗಿದೆ ಎಂದು ಯತಿಕಾರ್ಪ್ ಕಾರ್ಯನಿರ್ವಾಹಣಾಧಿಕಾರಿ ಯತೀಶ್ ಕೆ.ಎಸ್ ತಿಳಿಸಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆ.೧೨ ರಂದು ಮಂಗಳೂರಿನ ಸೇಂಟ್ ಅಲೋಶಿಯಸ್ ಕಾಲೇಜಿನಲ್ಲಿ ಮತ್ತು ಫೆ. ೧೩ರಂದು ಉಡುಪಿಯ ಮಣಿಪಾಲ್ ಯೂನಿವರ್ಸಿಟಿ ವಾಣಿಜ್ಯ ವಿಭಾಗದಲ್ಲಿ ಸಂದರ್ಶನ ಆಯೋಜಿಸಲಾಗಿದೆ ಎಂದರು.
ಸAದರ್ಶನಕ್ಕೆ ಬರುವ ಅಭ್ಯರ್ಥಿಗಳು ಆಧಾರ್ ಪ್ರತಿ, ಪದವಿ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಪ್ರತಿ ಜಿಲ್ಲಾ ಕೇಂದ್ರದಲ್ಲಿಯೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಆಯಾ ತಾಲೂಕಿನ ಅಭ್ಯರ್ಥಿಗಳು ದೂರವಾಣಿ ಸಂಖ್ಯೆ ೭೩೪೯೭೪೦೭೭೭ಕ್ಕೆ ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದು ಎಂದು ಹೇಳಿದರು.
ಆಯ್ಕೆಯಾದವರಿಗೆ ತಿಂಗಳಿಗೆ ೨೫ ಸಾವಿರ ರೂ.ನಿಂದ ೩೦ ಸಾವಿರ ರೂ. ವರೆಗೆ ವೇತನ ನೀಡಲಾಗುವುದು. ಅಭ್ಯರ್ಥಿಗಳಿಗೆ ತಮ್ಮ ತಾಲೂಕಿನಿಂದಲೇ ಕೆಲಸ ಮಾಡಲು ಅವಕಾಶವಿದ್ದು, ಮೊದಲ ೬ ತಿಂಗಳು ಆರ್ಟಿಫಿಷಿಯಲ್ ಇಂಟಲಿಜೆನ್ಸ್ನ ಬಗ್ಗೆ ಜಾಗೃತಿ ಮೂಡಿಸಲು ಆಯ್ಕೆಯಾದ ಅಭ್ಯರ್ಥಿಗಳು ಫೀಲ್ಡ್ನಲ್ಲಿದ್ದು ಕಾರ್ಯನಿರ್ವಹಿಸಲು ಸಿದ್ದವಿರಬೇಕು. ೬ ತಿಂಗಳು ಫೀಲ್ಡ್ನಲ್ಲಿ ಅನುಭವ ಪಡೆದುಕೊಂಡ ಬಳಿಕ ಅವರನ್ನು ಸಂಸ್ಥೆಯ ಖಾಯಂ ಉದ್ಯೋಗಿಯಾಗಿ ಕಚೇರಿಗೆ ನೇಮಿಸಲಾಗುತ್ತದೆ. ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯು ೪ ಹಂತಗಳಲ್ಲಿ ನಡೆಯಲಿದೆ ಎಂದು ವಿವರಿಸಿದರು.
ಯತಿಕಾರ್ಪ್ ಇಂಡಿಯಾ ಪ್ರೈವೇಟ್ ಲಿಮಿಟೆಡ್, ತಂತ್ರಜ್ಞಾನ ಕ್ಷೇತ್ರದಲ್ಲಿ ತನ್ನದೇ ಆದ ಸ್ಥಾನವನ್ನು ಭದ್ರಪಡಿಸಿಕೊಂಡಿದೆ. ೨೦೧೫ರಲ್ಲಿ ಕಂಪ್ಯೂಟರ್ ಸೇವಾ ಸಂಸ್ಥೆಯಾಗಿ ಪ್ರಾರಂಭವಾದ ಯತಿಕಾರ್ಪ್ ೨೦೧೯ರಲ್ಲಿ ಕಾರ್ಪೊರೇಟ್ ಜಗತ್ತಿಗೆ ಕಾಲಿಟ್ಟಿತು. ಸರ್ಕಾರಿ ಸಂಸ್ಥೆಗಳು, ಬಹುರಾಷ್ಟಿçÃಯ ಕಂಪನಿಗಳು, ಭಾರತೀಯ ನೌಕಾಪಡೆ, ಕೈಗಾ ಅಣುಸ್ಥಾವರದಂತಹ ಪ್ರತಿಷ್ಠಿತ ಕಾರ್ಯಕ್ಷೇತ್ರಗಳಲ್ಲಿ ತಂತ್ರಜ್ಞಾನ ಸೇವೆಗಳನ್ನು ಒದಗಿಸುವ ಮೂಲಕ ಯತಿಕಾರ್ಪ್ ಗುರುತಿಸಿಕೊಂಡಿದೆ ಎಂದು ತಿಳಿಸಿದರು.
ಕಳೆದ ಕೆಲವು ವರ್ಷಗಳಿಂದ ಕೃತಕ ಬುದ್ಧಿಮತ್ತೆ (ಎಐ) ಕ್ಷೇತ್ರದಲ್ಲಿ ಸಕ್ರಿಯವಾಗಿ ಕಾರ್ಯನಿರ್ವಹಿಸುತ್ತಿರುವ ಯತಿಕಾರ್ಪ್, ಇದೀಗ ಸಾಮಾನ್ಯ ಜನರಿಗೂ ಎಐ ತಂತ್ರಜ್ಞಾನದ ಪ್ರಯೋಜನಗಳನ್ನು ತಲುಪಿಸುವ ಮಹತ್ವದ ಹೆಜ್ಜೆಯನ್ನಿಟ್ಟಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಯತಿಕಾರ್ಪ್ ಸಂಸ್ಥೆಯ ಯೋಜನಾ ವ್ಯವಸ್ಥಾಪಕಿ ಕೃಪಾಪ್ರಭು, ಎಚ್‌ಆರ್ ಭೂಮಿಕಾ ಪೂಜಾರಿ ಉಪಸ್ಥಿತರಿದ್ದರು.