ಗೆದ್ಲೇಹಳ್ಳಿಯಲ್ಲಿ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ಆಯೋಜಿಸಿದ್ದ ಗೀತ ಗಾಯನ ಕಾರ್ಯಕ್ರಮವನ್ನು ಜಿಪಂ ಮಾಜಿ ಉಪಾಧ್ಯಕ್ಷೆ ಸಾವಿತ್ರಿ ಗಂಗಪ್ಪ ಉದ್ಘಾಟಿಸಿದರು. ಸೂರಿ ಶ್ರೀನಿವಾಸ್, ಚಿಕ್ಕನಲ್ಲೂರು ಪರಮೇಶ್, ಬಸವರಾಜ್ ಇತರರಿದ್ದರು. 
ಜಿಲ್ಲೆ

ಯುವಜನರಲ್ಲಿ ಮಾತೃಭಾಷಾಭಿಮಾನ ಬೆಳೆಯಲಿ

ಕಡೂರು: ಯುವಜನರು ಕನ್ನಡ ಭಾಷೆ ಮೇಲೆ ಅಭಿಮಾನ, ಪ್ರೇಮ ಬೆಳೆಸಿಕೊಂಡು ಮಾತೃಭಾಷೆಯಲ್ಲೇ ಮಾತನಾಡಬೇಕು ಎಂದು ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷೆ ಸಾವಿತ್ರಿ ಗಂಗಪ್ಪ ತಿಳಿಸಿದರು.

ಗೆದ್ಲೇಹಳ್ಳಿ ಸ್ನಾತಕೋತ್ತರ ಕೇಂದ್ರದಲ್ಲಿ ಕಡೂರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಿಂದ ಆಯೋಜಿಸಿದ್ದ ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮದಲ್ಲಿ ಗೀತಗಾಯನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ಭಾಷೆಗೆ ಅಳಿವಿಲ್ಲ. ಆದರೆ ನಾವೆಲ್ಲರೂ ಮಾತೃಭಾಷೆಯಲ್ಲೇ ಮಾತನಾಡಬೇಕು. ಆಗ ಶಾಶ್ವತವಾಗಿ ಭಾಷೆ ಜತೆಗೆ ಸಂಸ್ಕೃತಿಯೂ ಉಳಿಯುತ್ತದೆ ಎಂದರು.

ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯಲ್ಲಿ ಕಸಾಪದಿಂದ ಯುವ ಘಟಕಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ದಾಸ ಸಾಹಿತ್ಯ ಪರಿಷತ್ ಅಧ್ಯಕ್ಷ ಹಿರೇನಲ್ಲೂರು ಶ್ರೀನಿವಾಸ್ ಮತ್ತು ತರೀಕೆರೆ ತಾಲೂಕು ಕಸಾಪ ಮಹಿಳಾ ಘಟಕದ ಅಧ್ಯಕ್ಷೆ ಸುನೀತಾ ಕಿರಣ್ ಎನ್‌ಎಸ್‌ಎಸ್ ಶಿಬಿರಾರ್ಥಿಗಳಿಗೆ ಗೀತ ಗಾಯನ ಏರ್ಪಡಿಸಿ, ಜಾನಪದ ಗೀತೆ ಮತ್ತು ಭಾವಗೀತೆಗಳನ್ನು ಹಾಡುವ ಮೂಲಕ ರಂಜಿಸಿದರು.

ತಾಲೂಕು ಕಸಾಪ ಅಧ್ಯಕ್ಷ ಚಿಕ್ಕನಲ್ಲೂರು ಪರಮೇಶ್, ಕಾಲೇಜಿನ ಸಹಾಯಕ ಪ್ರಾಧ್ಯಾಪಕರಾದ ಎ.ನಾಗೇಶ್, ಎಚ್.ಎಸ್.ಸವಿತಾ, ಶಿಬಿರ ಅಧಿಕಾರಿಗಳಾದ ಎನ್.ಎಸ್.ಪಂಕಜಾ, ಭಂಡಾರಿ ಬಸವರಾಜ್, ಕೆ.ಎಸ್.ವಿಶ್ವಾಸ್ ಇತರರಿದ್ದರು.