ಜಿಲ್ಲೆ

ಯುವಜನೋತ್ಸವ ಮುಂದೂಡಿಕೆ

ಚಾಮರಾಜನಗರ: ಸತತವಾಗಿ ಚಾಮರಾಜನಗರ ಜಿಲ್ಲೆಯಲ್ಲಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಡಿ. 3ರಂದು ನಡೆಯಬೇಕಿದ್ದ ಚಾಮರಾಜನಗರ ಜಿಲ್ಲಾಮಟ್ಟದ ಯುವಜನೋತ್ಸವ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

ಫೆಂಗಲ್ ಚಂಡಮಾರುತದ ಪರಿಣಾಮ ಚಾಮರಾಜನಗರ ಜಿಲ್ಲೆಯಲ್ಲಿ ಸತತವಾಗಿ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ ಮಳೆ ಮುಂದುವರೆಯುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಡಿ. 3ರಂದು ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ. ಹೀಗಾಗಿ ಡಿ. 3ರಂದು ನಿಗದಿಯಾಗಿದ್ದ ಜಿಲ್ಲಾಮಟ್ಟದ ಯುವಜನೋತ್ಸವವನ್ನು ಮುಂದೂಡಲಾಗಿದ್ದು, ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಶಿವಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.