ಜಿಲ್ಲೆ

ಯುವತಿ ಅತ್ಯಾಚಾರ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಉತ್ತರಪ್ರದೇಶದ ಹಾಥರಸ್ ಪಟ್ಟಣದ ಯುವತಿ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಘಟನೆ ಖಂಡಿಸಿ ಅ.5 ರಂದು ವಿಜಯಪುರ ನಗರದಲ್ಲಿ ಬೃಹತ್ ಪ್ರತಿಭಟನಾ ರ‌್ಯಾಲಿ ಹಮ್ಮಿಕೊಳ್ಳಲಾಗಿದೆ ಎಂದು ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಸುರೇಶ ಮಣ್ಣೂರ ತಿಳಿಸಿದ್ದಾರೆ.

ಅಂದಿನ ರ‌್ಯಾಲಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪದಾಧಿಕಾರಿಗಳು, ಕಾರ್ಯಕರ್ತರು, ದಲಿತ ಮುಖಂಡರು, ಪ್ರಗತಿಪರ ಚಿಂತಕರು, ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕೆಂದು ದೇವೇಂದ್ರ ಹಾದಿಮನಿ, ರಾವುತ್ ತಳಕೇರಿ, ಹರೀಶ್ ನಾಟೀಕಾರ, ಅನೀಲ ಹೊಸಮನಿ, ನಾಗೇಶ ಕಟ್ಟಿಮನಿ ಕೋರಿದ್ದಾರೆ.