ಜಿಲ್ಲೆ

ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ

ತುಮಕೂರು ಡೆಸ್ಕ್

ಚಿಕ್ಕನಾಯಕನಹಳ್ಳಿ:- ಯುವತಿಯನ್ನು ರ್ನಿಜನ ಪ್ರದೇಶಕ್ಕೆ ಎಳೆದೊಯ್ದು ಬಾಯಿಗೆ ಬಟ್ಟೆ ತುರುಕಿ ಸಾಮೂಹಿಕ ಅತ್ಯಾಚಾರ ಎಸಗಿರುವ ಪೈಶಾಚಿಕಿ ಕೃತ್ಯ ಚಿಕ್ಕನಾಯಕನಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ತಾಲೂಕಿನ ಕಂದಿಕೆರೆ ಹೋಬಳಿಯ ಗ್ರಾಮವೊಂದರಲ್ಲಿ ಯುವತಿಯನ್ನು 3 ಯುವಕರು ಜೂನ್​ 9ರಂದು ರ್ನಿಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರವೆಸಗಿದ್ದಾರೆ. ಸಂತ್ರಸ್ತೆ ಜು.8ರಂದು ಠಾಣೆಗೆ ತೆರಳಿ ದೂರು ನೀಡಿದ ಹಿನ್ನೆಲೆಯಲ್ಲಿ ಅತ್ಯಾಚಾರವೆಸಗಿದ ಮೂವರು ಆರೋಪಿ ಯುವಕರನ್ನು ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.