ಜಿಲ್ಲೆ

ಯುವನಿಧಿ ಗ್ಯಾರಂಟಿ ನೊಂದಣಿಗೆ ವಿಶೇಷ ಅಭಿಯಾನ

ಚಿತ್ರದುರ್ಗ: ಗ್ಯಾರಂಟಿಗಳಲ್ಲಿ ಒಂದಾದ ಯುವನಿಧಿ ಯೋಜನೆ ಪರಿಣಾಮಕಾರಿ ಜಾರಿ ನಿಟ್ಟಿನಲ್ಲಿ ಜಿಲ್ಲೆ ಎಲ್ಲ ಕಾಲೇಜುಗಳಲ್ಲಿ ವಿಶೇಷ ಅಭಿಯಾನ ಆಯೋ ಜಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಅರ್ಹ ಫಲಾನುಭವಿಗಳನ್ನು ನೋಂದಣಿ ಮಾಡಿಸುವಂತೆ ಜಿಲ್ಲಾಧಿಕಾರಿ ಜಿಆರ್‌ಜೆ ದಿವ್ಯಾಪ್ರಭು ಅಧಿ ಕಾರಿಗಳಿಗೆ ಸೂಚಿಸಿದರು.
ಜಿಪಂದಲ್ಲಿ ಶುಕ್ರವಾರ ಯುವನಿಧಿ ಯೋಜನೆ ಕುರಿತಂತೆ ಜಿಲ್ಲೆಯ ತಹಸೀಲ್ದಾರರು,ಪದವಿ,ಡಿಪ್ಲೊಮಾ ಕಾಲೇಜು ಪ್ರಾಂಶುಪಾಲರೊಂದಿಗೆ ಸಭೆ ನಡೆಸಿದ ಅವರು, 2022-23ನೇ ಶೈಕ್ಷಣಿಕ ಸಾಲಿನಲ್ಲಿ ವ್ಯಾಸಂಗ ಮಾಡಿ,2023 ತೇರ್ಗಡೆಯಾದ ಮತ್ತು ಫಲಿತಾಂಶ ಪ್ರಕಟಗೊಂಡ 180ದಿನ ಅಥವಾ 6 ತಿಂಗಳ ಒಳಗಡೆ ಕೆಲಸ ದೊರೆಯದ ನಿರುದ್ಯೋಗಿ ಅರ್ಹ ಪದವೀಧರರಿಗೆ 3000 ಹಾಗೂ ಡಿಪ್ಲೊಮಾ ತೇರ್ಗಡೆಯಾದವರಿಗೆ 1500 ರೂ.ಮಾಸಿಕ ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದರು.
12ರಂದು ಚಾಲನೆ
ಯುವನಿಧಿ ಗ್ಯಾರಂಟಿಯಡಿ ನಿರುದ್ಯೋಗ ಭತ್ಯೆ ವಿತರಣೆಗೆ ಜ.12ರಂದು ಸಿಎಂ ಸಿದ್ದರಾಮಯ್ಯ ಅವರು ಶಿವಮೊಗ್ಗದಲ್ಲಿ ಚಾಲನೆ ನೀಡಲಿ ದ್ದಾರೆ. ಈ ಸಮಾರಂಭಕ್ಕೆ ಚಿತ್ರದುರ್ಗ ಜಿಲ್ಲೆಯಿಂದ 5 ಸಾವಿರ ಫಲಾನುಭವಿಗಳನ್ನು ಕಳುಹಿಸಿಕೊಡಲಾಗುತ್ತದೆ ಎಂದರು. ದಾವಣಗೆರೆ ವಿಶ್ವ ವಿದ್ಯಾನಿಲಯ ರಿಜಿಸ್ಟ್ರಾರ್ ಸರೋಜಾ ಮಾತನಾಡಿ, ವಿವಿ ಅಂತಿಮ ಪದವಿ ವಿದ್ಯಾರ್ಥಿಗಳ ವಿವರವನ್ನು ನ್ಯಾಡ್‌ಗೆ ಅಪ್‌ಲೋಡ್ ಮಾಡಲಾ ಗಿದ್ದು, ನ್ಯಾಡ್‌ಗೆ ಸಂಬಂಧಿಸಿದ ಸಮಸ್ಯೆಗಳನ್ನು ಪರಿಹರಿಸಲು ಸಹಕಾರ ನೀಡುವುದಾಗಿ ಹೇಳಿದರು. ಯೋಜನಾ ನಿರ್ದೇಶಕ ಡಾ. ರಂಗಸ್ವಾಮಿ, ಜಿಲ್ಲಾ ಕೌಶಲಾಭಿವೃದ್ಧಿ ಅಧಿಕಾರಿ ಕೆ.ಗೋಪಾಲರೆಡ್ಡಿ,ವಿವಿ ನ್ಯಾಡ್ ನೋಡಲ್ ಅಧಿಕಾರಿ ಪ್ರೊ.ಅನುಪ್,ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಮತ್ತಿತರರು ಇದ್ದರು.

ಯುವನಿಧಿ ಗ್ಯಾರಂಟಿಗೆ ಹೆಚ್ಚಿನ ಸಂಖ್ಯೆಯ ಫಲಾನುಭವಿಗಳ ನೋಂದಣಿ ಕುರಿತಂತೆ ಚಿತ್ರದುರ್ಗದಲ್ಲಿ ಶುಕ್ರವಾರ ಡಿಸಿ ಜಿಆರ್‌ಜೆ ದಿವ್ಯಾಪ್ರಭು ಅವರು ಅಧಿಕಾರಿಗಳ,ಪ್ರಾಂಶುಪಾಲರ ಸಭೆ ನಡೆಸಿದರು. ದಾವಣಗೆರೆ ವಿವಿ ಸರೋಜಾ, ಜಿಪಂ ಯೋಜನಾ ನಿರ್ದೇಶಕ ಡಾ.ರಂಗಸ್ವಾಮಿ ಇದ್ದರು.