ಯಾದಗಿರಿ: ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಕೂಡ ಒಂದಾಗಿದ್ದು, ಈ ಯೋಜನೆಗೆ ಅತಿ ಹೆಚ್ಚು ನೋಂದಣಿ ಮಾಡುವ ಮೂಲಕ ಗುರಿ ಸಾಧಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಸುಶೀಲಾ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಶನಿವಾರ ಕರೆದಿದ್ದ ಯುವನಿಧಿ ಯೋಜನೆಯ ನೋಂದಣಿ ಮತ್ತು ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಈ ಯೋಜನೆಯ ಸೌಲಭ್ಯವನ್ನು ಅರ್ಹ ಫಲಾನುಭವಿಗಳಿಗೆ ಒದಗಿಸಬೇಕು ಎಂದು ತಾಕೀತು ಮಾಡಿದರು.
ಈವರೆಗೆ ೪೬೭೮ ಫಲಾನುಭವಿಗಳು ನೋಂದಣಿಯಾಗಿದ್ದು, ಇದರಲ್ಲಿ ೪೮೩೦ ಫಲಾನುಭವಿಗಳಿಗೆ ಪುನರಾವರ್ತನೆ ಒಳಗೊಂಡAತೆ ನೇರ ನಗದು ಡಿಬಿಟಿ ಮೂಲಕ ಜನವರಿ ತಿಂಗಳಿAದ ಮೇವರೆಗೆ ೧,೪೪,೭೩, ೫೦೦ ರೂ.ಜಮೆಯಾಗಿದೆ ಎಂದರು.
ಜಿ¯್ಲೆಯ ಎಲ್ಲ ಕಾಲೇಜು ಪ್ರಾಚಾರ್ಯರು, ತಮ್ಮ ಸಂಸ್ಥೆಯಲ್ಲಿ ೨೦೨೨-೨೩ರಲ್ಲಿ ಪದವಿ, ಡಿಪ್ಲೊಮಾ ಪಡೆದ ವಿದ್ಯಾರ್ಥಿಗಳಿಗೆ ಯೋಜನೆಯ ಬಗ್ಗೆ ಮಾಹಿತಿ ನೀಡುವ ಮೂಲಕ ಹೆಚ್ಚಿನ ಸಂಖ್ಯೆಯ ಯುವ ಜನತೆಗೆ ಇದರ ಪ್ರಯೋಜನ ಪಡೆಯುವಂತೆ ನೋಡಿಕೊಳ್ಳಬೇಕು. ಅಲ್ಲದೆ ವಿದ್ಯಾರ್ಥಿಗಳ ಮಾಹಿತಿಯನ್ನು ಸಂಬAಧಪಟ್ಟ ಅಧಿಕಾರಿಗಳಿಗೆ ನೀಡಬೇಕು. ಜಿ¯್ಲÉಯ ಅರ್ಹ ಎಲ್ಲ ಪದವಿ, ಡಿಪ್ಲೋಮಾ ವಿದ್ಯಾರ್ಥಿಗಳಿಗೆ ಈ ಯೋಜನೆಯ ನೆರವು ಪಡೆಯುವಂತೆ ತಿಳಿ ಹೇಳಬೇಕು ಎಂದು ತಿಳಿಸಿದರು.
ಜಿಲ್ಲೆಯಲ್ಲಿರುವ ಇರುವ ಐಟಿಐ ತರಬೇತಿಗಾಗಿ ಪ್ರವೇಶ ಪಡೆಯುವುದಕ್ಕೆ ಐಟಿಐ ಕಾಲೇಜುಗಳ ಪ್ರಾಚಾರ್ಯರು ಹಾಗೂ ಸಂಬAಧಪಟ್ಟ ಅಧಿಕಾರಿಗಳು ವ್ಯಾಪಕ ಪ್ರಚಾರ ಮಾಡಬೇಕು. ಕಡೆಚೂರಿನಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದ ಬಗ್ಗೆ ಜಿ¯್ಲÉಯ ಎ¯್ಲÁ ಕಾಲೇಜುಗಳಿಗೆ ಭೇಟಿ ನೀಡಿ ಅಲ್ಲಿನ ಸೌಲಭ್ಯಗಳ ಕುರಿತು ಮಾಹಿತಿ ನೀಡಿ ಎಂದರು.
ವಿವಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳ ಅಂಕಪಟ್ಟಿ ವಿತರಣೆಯಲ್ಲಿ ಸಮಸ್ಯೆಯಾಗಿದ್ದು, ಈ ಸಮಸ್ಯೆಗೆ ಎಲ್ಲ ಕಾಲಾಜು ಪ್ರಾಚಾರ್ಯರು ವಿವಿಗೆ ಪತ್ರ ಬರೆದು ಸಮಸ್ಯೆಗೆ ಸೂಕ್ತ ಪರಿಹಾರ ಕಂಡುಕೊಳ್ಳಬೆಕು ಎಂದು ತಾಕೀತು ಮಾಡಿದರು.
ಜಿ¯್ಲÁ ಪಂಚಾಯಿತಿ ಸಹಾಯಕ ಕಾರ್ಯದರ್ಶಿ ಜಹೀರ್ ಅಹ್ಮದ್, ಜಿ¯್ಲÁ ಉದ್ಯೋಗಾಧಿಕಾರಿ ಪ್ರಭಾಕರ್, ಜಿ¯್ಲÁ ಕೌಶಲ್ಯಾಭಿವೃದ್ದಿ ಇಲಾಖೆ ಸಹಾಯಕ ನಿರ್ದೇಶಕ ಬಸಪ್ಪ ತಳವಾಡಿ, ಪ್ರಾಚಾರ್ಯ ಅನೀಲಕುಮಾರ, ಕೌಶಲ್ಯಾಭಿವೃದ್ದಿ ಇಲಾಖೆ ಅಭಿಯಾನ ವ್ಯವಸ್ಥಾಪಕ ವಿಜಯಕುಮಾರ ಪಾಟೀಲ್, ಪ್ರಭಾರಿ ಡಿಡಿಪಿಐ ಬಸನಗೌಡ ಆಲ್ದಾಳ, ಸರಕಾರಿ ಪದವಿ ಕಾಲೇಜು ಪ್ರಾಚಾರ್ಯ ಡಾ.ಸುಭಾಶಂದ್ರ ಕೌಲಗಿ, ಎಲ್‌ಕೆಇಟಿ ಮಹಿಳಾ ಪದವಿ ಕಾಲೇಜಿನ ಪ್ರಾಂಶುಪಾಲ ಜಿ.ಎಂ ವಿಶ್ವಕರ್ಮ ಇತರರಿದ್ದರು.